ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕೋರ್ಟ್ ಮಹತ್ವದ ರಿಲೀಫ್ ನೀಡಿದೆ.
ಆರ್‌ಎಸ್‌ಎಸ್ ಕಾರ್ಯಕರ್ತರೊಬ್ಬರು ಸಲ್ಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಾಕ್ಷಿಯಾಗಿ ಹೆಚ್ಚುವರಿ ದಾಖಲೆಗಳನ್ನು ಹಾಜರುಪಡಿಸುವಂತೆ ಭಿವಂಡಿ ನ್ಯಾಯಾಲಯದ ಆದೇಶವನ್ನು ಬಾಂಬೆ ಹೈಕೋರ್ಟ್ ರದ್ದುಗೊಳಿಸಿದೆ.
“ಆರ್‌ಎಸ್‌ಎಸ್ ಗಾಂಧಿಯನ್ನು ಕೊಂದಿದೆ” ಎಂದು ಹೇಳಿಕೆ ನೀಡಿದ್ದಕ್ಕಾಗಿ ಆರ್‌ಎಸ್‌ಎಸ್ ಕಾರ್ಯಕರ್ತರೊಬ್ಬರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಬಾಂಬೆ ಹೈಕೋರ್ಟ್ ರಾಹುಲ್ ಗಾಂಧಿ ಅವರನ್ನು ದೋಷಮುಕ್ತಗೊಳಿಸಿದೆ. ಈ ಪ್ರಕರಣದಲ್ಲಿ ತಮ್ಮ ಭಾಷಣದ ಧ್ವನಿಮುದ್ರಣಕ್ಕೆ ಅವಕಾಶ ನೀಡಿರುವ ನ್ಯಾಯಾಲಯದ ತೀರ್ಪನ್ನು ಕಾಂಗ್ರೆಸ್ ನಾಯಕ ಪ್ರಶ್ನಿಸಿದ್ದರು.
ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿಯಲ್ಲಿ ರಾಹುಲ್ ಗಾಂಧಿ ಈ ಭಾಷಣ ಮಾಡಿದ್ದರು. ಅವರ ಹೇಳಿಕೆಯ ಬೆನ್ನಲ್ಲೇ ಆರ್‌ಎಸ್‌ಎಸ್ ಕಾರ್ಯಾಧ್ಯಕ್ಷ ರಾಜೇಶ್ ಕುಂಟೆ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.