ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಯ ವಿಚಾರಣೆಗಾಗಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಶುಕ್ರವಾರ ಬೆಂಗಳೂರಿನ ವಿಶೇಷ ಜನತಾ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ.
ಜೂನ್ 1ರ ವಿಚಾರಣೆಗೆ ರಾಹುಲ್ ಗಾಂಧಿ ಹಾಜರಾಗಿರಲಿಲ್ಲ. ಅಂದು ವಿಚಾರಣೆಗೆ ಹಾಜರಾಗದೆ ವಿನಾಯ್ತಿ ನೀಡಿದ ನ್ಯಾಯಾಲಯ, ಜೂನ್ 7ರಂದು ಹಾಜರಾಗುವಂತೆ ಆದೇಶಿಸಿದೆ.
ವಿಶೇಷ ನ್ಯಾಯಾಲಯವು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರಿಗೆ ಜೂನ್ 1 ರಂದು ಜಾಮೀನು ಮಂಜೂರು ಮಾಡಲಾಗಿತ್ತು. ಇದಿಗೆ ಜೂನ್ 7 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ರಾಹುಲ್ ಗಾಂಧಿಗೆ ಆದೇಶಿಸಿದ್ದಾರೆ. ರಾಹುಲ್ ಗಾಂಧಿ ಪ್ರಕರಣದಲ್ಲಿ ನಾಲ್ಕನೇ ಆರೋಪಿಯಾಗಿದ್ದಾರೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಮೊದಲ ಮೂವರು ಆರೋಪಿಗಳು ಆಗಿದ್ದರು.