ಹೊಸದಿಗಂತ ಡಿಜಿಟಲ್ ಡೆಸ್ಕ್:
ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಶಿವಸೇನಾ ನಾಯಕ ಸಂಜಯ್ ರಾವತ್ ಅವರಿಗೆ ಮಜಗಾಂವ್‌ನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು 15 ದಿನಗಳ ಸಾದಾ ಜೈಲು ಶಿಕ್ಷೆ ಮತ್ತು ₹25,000 ದಂಡ ವಿಧಿಸಿದೆ.
ಬಿಜೆಪಿ ನಾಯಕ ಕಿರಿತ್ ಸೋಮಯ್ಯ ಅವರ ಪತ್ನಿ ಮೇಧಾ ಸೋಮಯ್ಯ ಅವರು ₹ 100 ಕೋಟಿ ‘ಶೌಚಾಲಯ ವಂಚನೆ’ಯಲ್ಲಿ ಭಾಗಿಯಾಗಿದ್ದಾರೆ ಎಂದು ರಾವುತ್ ಆರೋಪಿಸಿದ್ದರು.
ಈ ಕುರಿತು ಮೇಧಾ ಸೋಮಯ್ಯ ಅವರು ಆಧಾರರಹಿತ ಮತ್ತು ಮಾನಹಾನಿಕರ ಆರೋಪಗಳನ್ನು ರಾವತ್ ಮಾಡಿದ್ದಾರೆ ಎಂದು ಆರೋಪಿಸಿ ಅರ್ಜಿ ಸಲ್ಲಿಸಿದ್ದರು.
ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ ಸಂಜಯ್ ರಾವತ್ ಅವರಿಗೆ 15 ದಿನಗಳ ಜೈಲು, 25,000 ರೂ. ದಂಡ ವಿಧಿಸಿಸಿದೆ ಎಂದು ಡಾ.ಮೇಧಾ ಸೋಮಯ್ಯ ಪರ ವಕೀಲ ವಿವೇಕಾನಂದ ಗುಪ್ತಾ ಹೇಳಿದ್ದಾರೆ.