ಮಾನನಷ್ಟ ಪ್ರಕರಣ: ಉದ್ಧವ್ ಠಾಕ್ರೆ, ಮಗ ಆದಿತ್ಯ ಸಹಿತ ಮೂವರ ವಿರುದ್ಧ ಸಮನ್ಸ್ ಜಾರಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾನನಷ್ಟ ಪ್ರಕರಣದಲ್ಲಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ದೆಹಲಿ ಹೈಕೋರ್ಟ್‌ ಸಮನ್ಸ್ ಜಾರಿ ಮಾಡಿದೆ.

ಉದ್ಧವ್ ಅವರಲ್ಲದೆ, ಅವರ ಪುತ್ರ ಆದಿತ್ಯ ಠಾಕ್ರೆ ಮತ್ತು ಪಕ್ಷದ ಹಿರಿಯ ನಾಯಕ ಸಂಜಯ್ ರಾವತ್ ಅವರಿಗೂ ಸಮನ್ಸ್ ನೀಡಲಾಗಿದೆ. ಪ್ರಕರಣದ ಮುಂದಿನ ವಿಚಾರಣೆ ಏಪ್ರಿಲ್ 17 ರಂದು ನಡೆಯಲಿದೆ.

ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂದೆ ಬಣದ ನಾಯಕ ಮತ್ತು ಸಂಸದ ರಾಹುಲ್ ರಮೇಶ್ ಶೆವಾಲೆ ಅವರ ಅರ್ಜಿಯ ಮೇಲೆ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ರಮೇಶ್ ಶೆವಾಲೆ ಅವರು ಮೂವರು ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಠಾಕ್ರೆ ಬಣದ ಸಂಸದ ಸಂಜಯ್ ರಾವತ್, ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ಶಾಸಕ ಆದಿತ್ಯ ಠಾಕ್ರೆ ಆ ಶಾಸಕರು ಮತ್ತು ಸಂಸದರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಈ ಹೇಳಿಕೆಗಳು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಅಂದರೆ ಗೂಗಲ್, ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಟ್ವಿಟ್ಟರ್‌ನಲ್ಲಿ ಇನ್ನೂ ಚಾಲ್ತಿಯಲ್ಲಿವೆ.ಹಾಗಾಗಿಯೇ ದೆಹಲಿ ಹೈಕೋರ್ಟ್ ಈ ವಿಚಾರದಲ್ಲಿ ಸಾಮಾಜಿಕ ಜಾಲತಾಣಗಳ ವಿರುದ್ಧ ನೋಟಿಸ್ ಜಾರಿ ಮಾಡಿದೆ.

ಉದ್ಧವ್ ಠಾಕ್ರೆ, ಸಂಜಯ್ ರಾವತ್ ಮತ್ತು ಆದಿತ್ಯ ಠಾಕ್ರೆ ಈ ಬಗ್ಗೆ ಹಲವು ರಾಜಕೀಯ ದಾಳಿಗಳನ್ನು ನಡೆಸಿದ್ದರು ಮತ್ತು ಏಕನಾಥ್ ಶಿಂದೆ ಅವರು ಶಿವಸೇನೆಯ ಚುನಾವಣಾ ಚಿಹ್ನೆಯನ್ನು 2000 ಕೋಟಿಗೆ ಖರೀದಿಸಿದ್ದಾರೆ ಎಂದು ಆರೋಪ ಮಾಡಿದ್ದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!