ಮಾನನಷ್ಟ ಮೊಕದ್ದಮೆ: ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಗೆ ಸಮನ್ಸ್ ಜಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಅಹಮದಾಬಾದ್‌ನ (Ahmedabad) ಮೆಟ್ರೋಪಾಲಿಟನ್ ನ್ಯಾಯಾಲಯವು ಸೋಮವಾರ ಬಿಹಾರದ (Bihar) ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ (Tejashwi Yadav) ಅವರ ವಿರುದ್ಧ ಸಮನ್ಸ್ ಜಾರಿ ಮಾಡಿದೆ.

ಗುಜರಾತಿಗಳು ವಂಚಕರು ಎಂಬ ಹೇಳಿಕೆಗಾಗಿ ಯಾದವ್ ವಿರುದ್ಧ ಮಾನನಷ್ಟ ಪ್ರಕರಣ ದಾಖಲಾಗಿತ್ತು. ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 499 ಮತ್ತು 500 ರ ಅಡಿಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಸೆಪ್ಟೆಂಬರ್ 22 ರಂದು ರಾಷ್ಟ್ರೀಯ ಜನತಾ ದಳದ (RJD) ನಾಯಕನಿಗೆ ಹಾಜರಾಗುವಂತೆ ಹೆಚ್ಚುವರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ DJ ಪರ್ಮಾರ್ ಸಮನ್ಸ್ ಜಾರಿ ಮಾಡಿದ್ದಾರೆ.

ನ್ಯಾಯಾಲಯವು ಯಾದವ್ ವಿರುದ್ಧ ಅಪರಾಧ ಪ್ರಕ್ರಿಯಾ ಸಂಹಿತೆಯ (ಸಿಆರ್‌ಪಿಸಿ) ಸೆಕ್ಷನ್ 202 ರ ಅಡಿಯಲ್ಲಿ ವಿಚಾರಣೆ ನಡೆಸಿತು. ಅಹಮದಾಬಾದ್ ಮೂಲದ 69 ವರ್ಷದ ಸಾಮಾಜಿಕ ಕಾರ್ಯಕರ್ತ ಮತ್ತು ಉದ್ಯಮಿ ಹರೇಶ್ ಮೆಹ್ತಾ ಅವರು ಸಲ್ಲಿಸಿದ ದೂರಿನ ಆಧಾರದ ಮೇಲೆ ಅವರಿಗೆ ಸಮನ್ಸ್ ನೀಡಲು ಸಾಕಷ್ಟು ಆಧಾರಗಳನ್ನು ಕಂಡುಕೊಂಡಿದೆ ಎಂದು ನ್ಯಾಯಾಲಯ ಹೇಳಿದೆ.

ಈಗಿನ ಪರಿಸ್ಥಿತಿಯಲ್ಲಿ ಗುಜರಾತಿಗಳು ಮಾತ್ರ ಲೂಟಿಕೋರರಾಗಬಹುದು. ಅವರ ವಂಚನೆಯನ್ನು ಕ್ಷಮಿಸಲಾಗುವುದು. ಅವರು ಎಲ್ಐಸಿ ಮತ್ತು ಬ್ಯಾಂಕ್ ಗಳಿಗೆ ಸೇರಿದ ಹಣವನ್ನು ನೀಡಿದ ನಂತರ ಅವರು ಪರಾರಿಯಾದರೆ ಯಾರು ಹೊಣೆ ಎಂದು ಯಾದವ್ ಕೇಳಿದ್ದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!