Saturday, March 25, 2023

Latest Posts

ಮಾನನಷ್ಟ ದೂರು: ಸಚಿವ ಸುಧಾಕರ್ ಗೆ ತಾತ್ಕಾಲಿಕ ರಿಲೀಫ್ ಕೊಟ್ಟ ಹೈಕೋರ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಸಚಿವ ಸುಧಾಕರ್ ವಿರುದ್ಧ ಚಿಕ್ಕಬಳ್ಳಾಪುರದ ಆಂಜನೇಯ ರೆಡ್ಡಿ ಎಂಬುವರು ಹಾಕಿದ್ದ ಮಾನನಷ್ಟ ಪ್ರಕರಣದಲ್ಲಿ ಹೈಕೋರ್ಟ್ ವಿಶೇಷ ಕೋರ್ಟ್ ಸಮನ್ಸ್ ಗೆ ತಡೆ ನೀಡಿದೆ.

ಈ ಮೂಲಕ ಸಚಿವ ಸುಧಾಕರ್ ಗೆ ತಾತ್ಕಾಲಿಕವಾಗಿ ಬಿಗ್ ರಿಲೀಫ್ ನೀಡಿದೆ.

ಚಿಕ್ಕಬಳ್ಳಾಪುರದ ಆಂಜನೇಯ ರೆಡ್ಡಿ ಎನ್ನುವವರು ಸಚಿವ ಡಾ.ಕೆ ಸುಧಾಕರ್ ತಮ್ಮ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ್ದಾರೆ ಎಂಬುದಾಗಿ ಮಾನನಷ್ಟ ದೂರು ದಾಖಲಿಸಿದ್ದರು. ಈ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸುಧಾಕರ್ ಗೆ ಸಮನ್ಸ್ ನೀಡಿತ್ತು.

ಸಮನ್ಸ್ ಪ್ರಶ್ನಿಸಿ ಹೈಕೋರ್ಟ್ ಮೊರೆಯನ್ನು ಸಚಿವ ಸುಧಾಕರ್ ಹೋಗಿದ್ದರು. ಈ ಅರ್ಜಿಯ ವಿಚಾರಣೆಯನ್ನು ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಕೆ.ನಟರಾಜನ್ ಅವರನ್ನೊಳಗೊಂಡ ನ್ಯಾಯಪೀಠವು ವಿಶೇಷ ಕೋರ್ಟ್ ನೀಡಿದ್ದಂತ ಸಮನ್ಸ್ ಗೆ ತಡೆ ನೀಡಿದೆ. ಹೀಗಾಗಿ ಸಚಿವ ಸುಧಾಕರ್ ಗೆ ಈಗ ತಾತ್ಕಾಲಿಕವಾಗಿ ಬಿಗ್ ರಿಲೀಫ್ ಸಿಕ್ಕಂತೆ ಆಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!