ಮೋದಿ ಕಾರ್ಯಕ್ರಮ, ಸಂಸದ ನಳಿನ್ ಬಗ್ಗೆ ಅಪಪ್ರಚಾರ: ಎರಡು ಪ್ರಕರಣ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಾಮಾಜಿಕ ಜಾಲತಾಣಗಳಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದ ಬಗ್ಗೆ ಅಪಪ್ರಚಾರ ನಡೆಸಲಾಗುತ್ತಿರುಯವ ಬೆಳವಣಿಗೆ ಬಗ್ಗೆ ಪೊಲೀಸ್ ಇಲಾಖೆ ಖಡಕ್ ಕ್ರಮ ಕೈಗೊಂಡಿದೆ.

ಅಪಪ್ರಚಾರ ನಡೆಸಲಾಗುತ್ತಿರುವ ಘಟನೆಗೆ ಸಂಬಧಿಸಿ ಎರಡು ಪ್ರ್ಯೇಕ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಬುಧವಾರ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ್ದಾರೆ.

ಸಮಾಜದ ಶಾಂತಿ ಕದಡುವ ಕೃತ್ಯಗಳ ಮೇಲೆ ಪೊಲೀಸ್ ಇಲಾಖೆ ಹದ್ದಿನ ಕಣ್ಣಿರಿಸಿದ್ದು, ಅಂತಹಾ ಕಿಡಿಗೇಡಿ ಕೃತ್ಯಗಳ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!