ಹೊಸದಿಗಂತ ಡಿಜಿಟಲ್ ಡೆಸ್ಕ್:
ಸನಾತನ ಧರ್ಮದ ಕುರಿತಂತೆ ವಿವಾದಾತ್ಮಕ ಹೇಳಿಕೆ ನೀಡಿದ್ದ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಇಂದು ಬೆಳಗ್ಗೆ 10:30ರ ಸುಮಾರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗುವ ಎಲ್ಲಾ ಸಾಧ್ಯತೆಗಳು ಇವೆ.
ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ ಎಂಬ ಅವರ ವಿವಾದಾತ್ಮಕ ಹೇಳಿಕೆಯ ಹಿನ್ನೆಲೆಯಲ್ಲಿ ಕಳೆದ ಐದು ತಿಂಗಳ ಹಿಂದೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿಮಾಡಿ ಖುದ್ದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತು. ಇಂದು ಅವರು 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಎದುರು ಹಾಜರಾಗಿ ವಿಚಾರಣೆ ಎದುರಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.