ಗೋಡ್ಸೆ ಭಾರತ ಮಾಡುವ ಬಿಜೆಪಿ ಷಡ್ಯಂತ್ರವನ್ನು ಸೋಲಿಸಿ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗಾಂಧಿಯ ದೇಹ ಕೊಂದರೂ ವಿಚಾರಗಳನ್ನು ಕೊಲ್ಲಲು ಅಸಾಧ್ಯ. ಬಿಜೆಪಿಯವರಿಗೆ ಗೋಡ್ಸೆ ನಾಯಕ. ಗೋಡ್ಸೆ ಭಾರತ ಮಾಡುವ ಬಿಜೆಪಿ ಷಡ್ಯಂತ್ರವನ್ನು ಸೋಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದ್ದಾರೆ.

ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯ ಎಐಸಿಸಿ ಅಧಿವೇಶನಕ್ಕೆ ನೂರು ವರ್ಷ ತುಂಬಿದ ನೆನಪಿಗಾಗಿ ಕೆಪಿಸಿಸಿ ಕಚೇರಿ ಭಾರತ್ ಜೋಡೋ ಭವನದಲ್ಲಿ ಬುಧವಾರ ನಡೆದ ಗಾಂಧಿ ‘ಗಾಂಧಿ ಭಾರತ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗಾಂಧಿ ಭಾರತದ ಆತ್ಮ. ಭಾರತದ ಪ್ರಜ್ಞೆ. ಇಲ್ಲಿ ಗೋಡ್ಸೆಗಳು ಬೆಳೆಯಲು ಬಿಡಬಾರದು. ಧರ್ಮದ ಹೆಸರಲ್ಲಿ, ಜಾತಿ ಹೆಸರಲ್ಲಿ ಸಮಾಜವನ್ನು ಛಿದ್ರ ಮಾಡಲು ಅವಕಾಶ ಕೊಡಬಾರದು. ಕೋಮು ಶಕ್ತಿಗಳನ್ನು ಸೋಲಿಸಬೇಕು ಎಂದರು.

ಗಾಂಧಿ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನ ಐತಿಹಾಸಿಕವಾದದ್ದು. ಜಗತ್ತು ಕಂಡ ಅಪರೂಪದ ಸಂತ. ಇವರು ಭಾರತೀಯರ ಹೆಮ್ಮೆ. ಗಾಂಧಿ ವಿಚಾರದಲ್ಲಿ ಬಿಜೆಪಿ ಬಹಳ ಕೆಳಮಟ್ಟದ ರಾಜಕಾರಣ ಮಾಡುತ್ತಿದೆ. ಬಿಜೆಪಿ ಗೋಡ್ಸೆ ಭಾರತ ಮಾಡಲು ಹೊರಟಿದೆ. ಈ ಷಡ್ಯಂತ್ರವನ್ನು ನಾವು ಸೋಲಿಸಬೇಕು ಎಂದು ಆರೋಪಿಸಿದರು.

ಕೋಮು ದುಷ್ಟಶಕ್ತಿಗಳು ರಾಜ್ಯದ, ದೇಶದ ಅಭಿವೃದ್ಧಿಗೆ ಮಾರಕ. ಬಿಜೆಪಿ ಅಧಿಕಾರದಲ್ಲಿ ಇದ್ದಾಗೆಲ್ಲಾ ಸಮಾಜವನ್ನು, ಜಾತಿ, ಧರ್ಮದ ಹೆಸರಲ್ಲಿ ವಿಭಜಿಸುತ್ತಿದ್ದರೇ ಹೊರತು ಜನಪರವಾದ, ಅಭಿವೃದ್ಧಿ ಪರವಾದ ಕಾರ್ಯಕ್ರಮಗಳನ್ನು ರೂಪಿಸಲೇ ಇಲ್ಲ. ಜಾರಿ ಮಾಡಲೂ ಇಲ್ಲ. ಬಿಜೆಪಿಗೆ ಜನಪರ ಪ್ರಗತಿ ಮುಖ್ಯ ಅಲ್ಲವೇ ಅಲ್ಲ ಎಂದರು.

 

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!