ಹೊಸದಿಗಂತ ಡಿಜಿಟಲ್ ಡೆಸ್ಕ್:
ಬ್ರಿಟನ್ ಸಂಸತ್ ಚುನಾವಣೆಯಲ್ಲಿ ಬ್ರಿಟನ್ ಹಾಲಿ ಪ್ರಧಾನಿ ರಿಷಿ ಸುನಕ್ ಸೋಲು ಅನುಭವಿಸಿದ್ದಾರೆ.
650 ಸದಸ್ಯ ಬಲದ ಬ್ರಿಟನ್ ಸಂಸತ್ ಚುನಾವಣೆಯಲ್ಲಿ ಕೈರ್ ಸ್ಟಾರ್ಮರ್ ನೇತೃತ್ವದ ಲೇಬರ್ ಪಾರ್ಟಿ 326 ಸ್ಥಾನದಲ್ಲಿ ಮುನ್ನಡೆ ಸಾಧಿಸಿದ್ದರೆ, ರಿಷಿ ಸುನಕ್ ನೇತೃತ್ವದ ಕನ್ಸರ್ವೇಟೀವ್ ಪಾರ್ಟಿ ಕೇವಲ 61 ಸ್ಥಾನದಲ್ಲಿ ಮುನ್ನಡೆ ಪಡೆದುಕೊಂಡಿದೆ. ಫಲಿತಾಂಶ ಹೊರಬೀಳುತ್ತಿದ್ದಂತೆ ರಿಷಿ ಸುನಕ್ ಸೋಲಿನ ಹೊಣೆ ಹೊತ್ತುಕೊಂಡಿದ್ದಾರೆ. ನನ್ನನ್ನು ಕ್ಷಮಿಸಿ, ಸೋಲಿನ ಹೊಣೆಯನ್ನು ನಾನು ಹೊತ್ತುಕೊಳ್ಳುತ್ತೇನೆ ಎಂದು ಸುನಕ್ ಹೇಳಿದ್ದಾರೆ.
ಬ್ರಿಟನ್ ಸಂಸತ್ತಿನ ಮ್ಯಾಜಿಕ್ ನಂಬರ್ 326. ಈ ಸಂಖ್ಯಾಬಲ ಹೊಂದಿದ ಪಾರ್ಟಿ ಸರ್ಕಾರ ರಚಿಸಲಿದೆ. ಕಳೆದ 14 ವರ್ಷಗಳಿಂದ ಅಧಿಕಾರದಲ್ಲಿದ್ದ ಕನ್ಸರ್ವೇಟೀವ್ ಪಾರ್ಟಿ ಇದೀಗ ಸೋಲಿಗೆ ಶರಣಾಗಿದೆ. ಸ್ಪಷ್ಟ ಬಹುಮತ ಸಿಕ್ಕಿದೆ. ಇದು ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ಬ್ರಿಟನ್ ಸೇವೆಗೆ ಸಜ್ಜಾಗಿದ್ದೇನೆ ಎಂದು ಸ್ಟಾರ್ಮರ್ ಹೇಳಿದ್ದಾರೆ.