ದಿಗಂತ ವರದಿ ಹುಬ್ಬಳ್ಳಿ:
ಲೋಕಸಭಾ ಚುನಾವಣೆಯಲ್ಲಿ ಸೋಲುಂಡ ಕಾಂಗ್ರೆಸ್ ಅದನ್ನು ಜೀರ್ಣಿಸಿಕೊಳ್ಳಾಗದೆ ಆಡಳಿತ ದುರಪಯೋಗ ಮಾಡಿ ಕೇಂದ್ರ ಸಂಸದೀಯ ಮಂಡಳಿಯ ಸದಸ್ಯ ಯಡಿಯೂರಪ್ಪ ಅವರನ್ನು ಬಂಧಿಸುವ ಸಂಚು ರೂಪಿಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಾಂಗ್ರೆಸ್ ರಾಜ್ಯ ಸರ್ಕಾರ ವಿರುದ್ಧ ಹರಿಹಾಯ್ದಿದ್ದಾರೆ.
ಶುಕ್ರವಾರ ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಪ್ರಹ್ಲಾದ ಜೋಶಿ, ಲೋಕಸಭೆ ಚುನಾವಣೆ 2024ರಲ್ಲಿ ಸೋಲುಂಡ ಕಾಂಗ್ರೆಸ್ ಅದನ್ನು ಜೀರ್ಣಿಸಿಕೊಳ್ಳಲಾಗದೆ ಆಡಳಿತವನ್ನು ದುರುಪಯೋಗ ಮಾಡಿ ಮನಬಂದಂತೆ ಷಡ್ಯಂತ್ರ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಯಡಿಯೂಪ್ಪ ಅವರ ವಿರುದ್ಧ ದೂರು ನೀಡಿದ ಮಹಿಳೆ ಮಹಿಳೆ ಮಾನಸಿಕವಾಗಿ ಅಸ್ವಸ್ಥಳು, ದುರುದ್ದೇಶದಿಂದ ದೂರು ನೀಡಿದ್ದಾಳೆ. ಆಕೆ ಈಗಾಗಲೇ ಐಎಎಸ್, ಐಪಿಎಸ್ ಅಧಿಕಾರಿಗಳು ಸೇರಿದಂತೆ ರಾಜಕಾರಣಿಗಳ ಮೇಲೆ 60ಕ್ಕೂ ಹೆಚ್ಚು ಕೇಸ್ ಗಳನ್ನು ದಾಖಲಿಸಿದ್ದಾಳೆ’ ಎಂದು ಅವರ ಗೃಹ ಮಂತ್ರಿಗಳೇ ಖುದ್ದಾಗಿ ಈ ಹಿಂದೆ ಹೇಳಿದ್ದರು. ಈಗ ನಿಮ್ಮ ದುರಾಡಳಿತವನ್ನು ಮರೆಮಾಚಲಿಕ್ಕೆ 81 ವರ್ಷದ ಬಿಜೆಪಿ ವರಿಷ್ಠರಾದ ಯಡಿಯೂರಪ್ಪ ಅವರ ಮೇಲೆ ಇಲ್ಲಸಲ್ಲದ ಪ್ರಕರಣ ದಾಖಲಿಸಿ ಎಳೆಯುತ್ತಿರುವುದು ರಾಜಕೀಯ ವೈಶಮ್ಯವಷ್ಟೇ. ನಿಮ್ಮ ಈ ದುರ್ಬುದ್ಧಿಗೆ ನೀವು ತಕ್ಕ ಪಾಠ ಕಲಿಯಲಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.