248 ಮತಗಳಿಂದ ಸೋಲು: ಮರುಎಣಿಕೆ ಕೋರಿ ಹೈಕೋರ್ಟ್ ಮೊರೆಹೋದ ಬಿಜೆಪಿ ಅಭ್ಯರ್ಥಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೋಲಾರದ ಮಾಲೂರು ಕ್ಷೇತ್ರದ ಮತಗಳ ಮರುಎಣಿಕೆ ಕೋರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ (Manjunath Gowda) ಪರ ವಕೀಲರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ.

248 ಮತಗಳ ಅಂತರದಿಂದ ಕಾಂಗ್ರೆಸ್​ನ ಕೆ.ವೈ.ನಂಜೇಗೌಡ ಗೆಲುವು ಸಾಧಿಸಿದ ಹಿನ್ನೆಲೆ ಮರುಎಣಿಕೆಗೆ ನಿರ್ದೇಶನ ನೀಡುವಂತೆ ಕೋರಿ ಮಂಜುನಾಥಗೌಡ ಮನವಿ ಮಾಡಿದ್ದಾರೆ.

ಆರಂಭದಲ್ಲಿ ​ಕಾಂಗ್ರೆಸ್ ಅಭ್ಯರ್ಥಿ, ನಂತರ ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ ನಂತರ ಪಕ್ಷೇತರ ಅಭ್ಯರ್ಥಿ ಹೂಡಿ ವಿಜಯ್​ ಕುಮಾರ್​ ಒಬ್ಬರಾದ ಮೇಲೆ ಒಬ್ಬರು ಮುನ್ನಡೆ ಸಾಧಿಸಿಕೊಂಡು ಬಂದಿದ್ದರು. ಆದರೆ, ಒಂದು ಹಂತದಲ್ಲಿ ಪಕ್ಷೇತರ ಅಭ್ಯರ್ಥಿ ಹೂಡಿ ವಿಜಯ್​ ಕುಮಾರ್​ 1500 ದಿಂದ 2000 ಮತಗಳ ಅಂತರದಲ್ಲಿ ಸುಮಾರು ಏಳೆಂಟು ಸುತ್ತು ಮುನ್ನಡೆ ಸಾಧಿಸಿದ್ದರು.
ಕೊನೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಕೇವಲ 248 ಮತಗಳ ಅಂತರದಲ್ಲಿ ಜಯಗಳಿಸುವ ಮೂಲಕ ಕುತೂಹಲಕ್ಕೆ ತೆರೆ ಬಿದ್ದಿತ್ತು. ಆದರೆ ಸ್ಥಳಕ್ಕೆ ಬಂದ ಬಿಜೆಪಿ ಅಭ್ಯರ್ಥಿ ಕೆ.ಎಸ್​.ಮಂಜುನಾಥಗೌಡ ಗೆಲುವಿನ ವಿರುದ್ದ ಪ್ರತಿಭಟಿಸಿ ಮರು ಎಣಿಕೆಗೆ ಆಗ್ರಹಿಸಿದ್ದರು. ಈ ವೇಳೆ ಮರುಎಣಿಕೆ ಮಾಡಿದರಾದರೂ ಬಿಜೆಪಿ ಅಭ್ಯರ್ಥಿ ಕೋರ್ಟ್​ನ ಮೊರೆ ಹೋಗುವುದಾಗಿ ಹೇಳಿದ್ದರು. ಅದರಂತೆಯೇ ಈಗ ಮಂಜುನಾಥಗೌಡ ಪರ ವಕೀಲರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ.

ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಅಭ್ಯರ್ಥಿ, ಅವರು ಎಲ್ಲಿಗೆ ಬೇಕಾದ್ರು, ಹೋಗಲಿ. ಇದು ಜನರು ಕೊಟ್ಟಿರುವ ತೀರ್ಪು. ಅಲ್ಲದೆ ಈ ಬಾರಿ ಕಾಂಗ್ರೆಸ್​ ಸರ್ಕಾರ ಬಂದಿದ್ದು, ನನ್ನ ಕನಸಿನ ಮಾಲೂರು ನಿರ್ಮಾಣ ಮಾಡುವುದಾಗಿ ಹೇಳಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!