Saturday, November 15, 2025

ಬಿಹಾರ ಚುನಾವಣೆಯಲ್ಲಿ ಹೀನಾಯ ಸೋಲು: ಲಾಲು ಪುತ್ರಿ ರೋಹಿಣಿ ರಾಜಕೀಯ ನಿವೃತ್ತಿ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮಹಾಘಟಬಂಧನ್ ಸೋಲು ಅನುಭವಿಸಿದ್ದು, ಹೀಗಾಗಿ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ)ದ ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ರೋಹಿಣಿ ಆಚಾರ್ಯ ಅವರು ಶನಿವಾರ ರಾಜಕೀಯವನ್ನು ತೊರೆಯುತ್ತಿರುವುದಾಗಿ ಹೇಳಿದ್ದಾರೆ.

ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ರೋಹಿಣಿ ಆಚಾರ್ಯ, ನಾನು ರಾಜಕೀಯವನ್ನು ತೊರೆಯುತ್ತಿದ್ದೇನೆ ಮತ್ತು ನನ್ನ ಕುಟುಂಬವನ್ನು ನಿರಾಕರಿಸುತ್ತಿದ್ದೇನೆ. ಸಂಜಯ್ ಯಾದವ್ ಮತ್ತು ರಮೀಜ್ ನನ್ನನ್ನು ಕೇಳಿಕೊಂಡಿದ್ದು ಇದನ್ನೇ ಮತ್ತು ನಾನು ಎಲ್ಲಾ ಆಪಾದನೆಗಳನ್ನು ಹೊರುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.

2025 ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಕೇವಲ 25 ಸ್ಥಾನಗಳನ್ನು ಗಳಿಸುವ ಮೂಲಕ ಹಿನ್ನಡೆ ಅನುಭವಿಸಿದ ಒಂದು ದಿನದ ನಂತರ, ರಾಜಕೀಯ ತ್ಯಜಿಸುವುದಾಗಿ ಘೋಷಿಸಿದ್ದಾರೆ.

error: Content is protected !!