ಟಿ20 ವಿಶ್ವಕಪ್ ಟೂರ್ನಿಗೆ ಹಾಲಿ ಚಾಂಪಿಯನ್ ರೆಡಿ: ಇಂಗ್ಲೆಂಡ್ ತಂಡ ಪ್ರಕಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಟಿ20 ವಿಶ್ವಕಪ್ ಟೂರ್ನಿಗೆ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವು ರೆಡಿಯಾಗಿದ್ದು,15 ಆಟಗಾರರನ್ನೊಳಗೊಂಡ ಬಲಿಷ್ಠ ಇಂಗ್ಲೆಂಡ್ ತಂಡವನ್ನು ಪ್ರಕಟಿಸಿದೆ.

ಮಾರಕ ವೇಗಿ ಜೋಫ್ರಾ ಆರ್ಚರ್ ತಂಡ ಕೂಡಿಕೊಂಡಿದ್ದಾರೆ. ಇನ್ನು ಆರ್‌ಸಿಬಿ ತಂಡದ ಸ್ಪೋಟಕ ಬ್ಯಾಟರ್ ವಿಲ್ ಜ್ಯಾಕ್ಸ್‌ ಹಾಗೂ ಎಡಗೈ ವೇಗಿ ರೀಸ್ ಟಾಪ್ಲೆ ಇಂಗ್ಲೆಂಡ್‌ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಜೋಸ್ ಬಟ್ಲರ್ ನಾಯಕನಾಗಿ ತಂಡವನ್ನು ಮುನ್ನಡೆಸುತ್ತಿದ್ದು, ಫಿಲ್ ಸಾಲ್ಟ್, ವಿಲ್ ಜ್ಯಾಕ್ಸ್, ಜಾನಿ ಬೇರ್‌ಸ್ಟೋವ್ ಜತೆಗೆ ಎಡಗೈ ಬ್ಯಾಟರ್ ಬೆನ್ ಡಕೆಟ್ ಸ್ಥಾನ ಪಡೆದಿದ್ದಾರೆ. ಇನ್ನು ಆಲ್ರೌಂಡರ್ ಮೋಯಿನ್ ಅಲಿಗೆ ಉಪನಾಯಕ ಪಟ್ಟ ಕಟ್ಟಲಾಗಿದೆ.

ಇನ್ನು ಮಧ್ಯಮ ಕ್ರಮಾಂಕದಲ್ಲಿ ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್‌ಸ್ಟೋನ್ ಹಾಗೂ ಸ್ಯಾಮ್ ಕರ್ರನ್ ಸ್ಥಾನ ಪಡೆದಿದ್ದಾರೆ. ಇನ್ನು ಬೌಲಿಂಗ್‌ ವಿಭಾಗದಲ್ಲಿ ಟಾಮ್ ಹಾರ್ಟ್ಲಿ, ಆದಿಲ್ ರಶೀದ್ ಜತೆಗೆ ಮಾರ್ಕ್‌ ವುಡ್ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.

ಇಂಗ್ಲೆಂಡ್ ತಂಡ
ಜೋಸ್ ಬಟ್ಲರ್(ನಾಯಕ), ಮೋಯಿನ್ ಅಲಿ(ಉಪನಾಯಕ), ಜೋಫ್ರಾ ಆರ್ಚರ್, ಜಾನಿ ಬೇರ್‌ಸ್ಟೊವ್, ಹ್ಯಾರಿ ಬ್ರೂಕ್, ಸ್ಯಾಮ್ ಕರ್ರನ್, ಬೆನ್ ಡಕೆಟ್, ಟಾಮ್ ಹಾರ್ಟ್ಲಿ, ವಿಲ್ ಜ್ಯಾಕ್ಸ್, ಕ್ರಿಸ್ ಜೋರ್ಡನ್, ಲಿಯಾಮ್ ಲಿವಿಂಗ್‌ಸ್ಟೋನ್, ಆದಿಲ್ ರಶೀದ್, ಫಿಲ್ ಸಾಲ್ಟ್, ರೀಸ್ ಟಾಪ್ಲೆ, ಮಾರ್ಕ್ ವುಡ್.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!