ಸಿಯಾಚಿನ್‌ಗೆ ರಕ್ಷಣಾ ಸಚಿವ ರಾಜನಾಥ ಸಿಂಗ್‌ ಭೇಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಸಿಯಾಚಿನ್‌ಗೆ ಇಂದು ರಕ್ಷಣಾ ಸಚಿವ ರಾಜನಾಥ ಸಿಂಗ್‌ ಅವರು ಭೇಟಿ ನೀಡಿ, ದೇಶದ ಸಮಗ್ರ ಸೇನಾ ಸಿದ್ಧತೆ ಕುರಿತು ಪರಿಶೀಲನೆ ನಡೆಸಿದರು.

ಸೇನಾ ಮುಖ್ಯಸ್ಥ ಜನರಲ್‌ ಮನೋಜ್‌ ಪಾಂಡೆ ಅವರೂ ಈ ವೇಳೆ ರಾಜನಾಥ್‌ ಜೊತೆಗೂಡಿದ್ದರು.

ಸಿಯಾಚಿನ್‌ನಲ್ಲಿ ಭಾರತೀಯ ಸೇನೆ ನಿಯೋಜಿಸಿ 40 ವರ್ಷಗಳು ತುಂಬಿ ಕೆಲವೇ ದಿನಗಳು ಕಳೆದಿದ್ದು, ಈ ಸಂದರ್ಭದಲ್ಲಿ ರಾಜನಾಥ ಸಿಂಗ್‌ ಅಲ್ಲಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಅವರು ಅಲ್ಲಿ ನಿಯೋಜನೆಗೊಂಡ ಸೈನಿಕರ ಜೊತೆ ಮಾತುಕತೆ ನಡೆಸಿದ್ದಾರೆ.

ಕಾರಾಕೋರಂ ಪರ್ವತ ಶ್ರೇಣಿಯಲ್ಲಿ ಸುಮಾರು 20,000 ಅಡಿ ಎತ್ತರದಲ್ಲಿರುವ ಸಿಯಾಚಿನ್‌ ನೀರ್ಗಲ್ಲಿನಲ್ಲಿ 1984ರ ಏಪ್ರಿಲ್‌ನಲ್ಲಿ ‘ಆಪರೇಷನ್‌ ಮೇಘದೂತ್‌’ ಸೇನಾ ಕಾರ್ಯಾಚರಣೆಯ ಭಾಗವಾಗಿ ಸೇನೆಯನ್ನು ನಿಯೋಜಿಸಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!