ಹೊಸದಿಗಂತ ಡಿಜಿಟಲ್ ಡೆಸ್ಕ್:
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ ರಾತ್ರಿ ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ನ ನ್ಯೂರೋ ಸರ್ಜರಿ ವಿಭಾಗಕ್ಕೆ ದಾಖಲಾಗಿದ್ದಾರೆ.
ಅವರು ಬೆನ್ನು ನೋವಿನಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ. ಅವರು ನ್ಯೂರೋ ಸರ್ಜನ್ ಡಾ. ಅಮೋಲ್ ರಹೇಜಾ ಅವರ ಆರೈಕೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಕ್ಷಣಾ ಸಚಿವರ ಆರೋಗ್ಯ ಸ್ಥಿರವಾಗಿದೆ ಎಂದು ಏಮ್ಸ್ನ ಮಾಧ್ಯಮ ವಿಭಾಗದ ಉಸ್ತುವಾರಿ ಡಾ. ರೀಮಾ ದಾದಾ ಹೇಳಿದ್ದಾರೆ.
ವೈದ್ಯರು ಪರೀಕ್ಷಿಸುತ್ತಿದ್ದಾರೆ. ಎಂಆರ್ ಐ ಸ್ಕ್ಯಾನ್ ನಡೆಸಲಾಗುವುದು ಎಂದು ಹೇಳಿದ್ದಾರೆ.