ಲೋಕಸಭಾ ಚುನಾವಣೆಯಲ್ಲಿ ನನಗೆ ಬಿಜೆಪಿಯಿಂದ ಬಿ ಫಾರ್ಮ್ ಸಿಗೋದು ಖಚಿತ: ಸಂಸದ ರಮೇಶ ಜಿಗಜಿಣಗಿ

ಹೊಸದಿಗಂತ ವರದಿ, ವಿಜಯಪುರ:

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ನನಗೆ ಬಿ ಫಾರ್ಮ್ ಸಿಗುವುದು ಖಚಿತ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯ ಬಿ ಫಾರ್ಮ್ ನನಗೆ ಸಿಗುವ ವಿಶ್ವಾಸ ಇದೆ. ಇದರಲ್ಲಿ ಯಾವುದೇ ಅನುಮಾನ ಇಲ್ಲ. ಈಗಲೇ ಬಿ ಫಾರ್ಮ್ ನೀಡಿದರೂ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸುವೆ ಎಂದರು.

ಇನ್ನು, ವಿಜಯಪುರ ವಿಮಾನ ನಿಲ್ದಾಣದ ಕ್ರೆಡಿಟ್ ನನಗೆ ಸಲ್ಲಬೇಕು. ಅದರಲ್ಲಿ ಎರಡು ಮಾತಿಲ್ಲ. ಈ ವಿಮಾನ ನಿಲ್ದಾಣಕ್ಕಾಗಿ ಹಲವು ಬಾರಿ ಪತ್ರ ಬರೆದು ಅನುದಾನ ತಂದವನು ನಾನು. ಹೀಗಾಗಿ ವಿಜಯಪುರದಲ್ಲಿ ವಿಮಾನ ನಿಲ್ದಾಣದ ಕ್ರೆಡಿಟ್ ನನಗೆ ಸಲ್ಲಬೇಕು ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!