March 7, 2026
Saturday, March 7, 2026
spot_img

ಭೂಸ್ವಾಧೀನ ಪ್ರಕರಣದಲ್ಲಿ ಪರಿಹಾರಕ್ಕೆ ವಿಳಂಬ: ಜಿಲ್ಲಾಧಿಕಾರಿ ಕಾರು ಜಪ್ತಿಗೆ ನ್ಯಾಯಾಲಯ ಆದೇಶ!

ಹೊಸದಿಗಂತ ವರದಿ ಕಲಬುರಗಿ:

ಭೂಸ್ವಾಧೀನ ಪ್ರಕರಣದಲ್ಲಿ ಪರಿಹಾರ ಮೊತ್ತವನ್ನು ಹಲವು ವರ್ಷಗಳಿಂದ ನೀಡದೆ ವಿಳಂಬ ಮಾಡಿರುವ ಹಿನ್ನೆಲೆ ಕಲಬುರಗಿ ಜಿಲ್ಲಾಧಿಕಾರಿಗಳ ಕಾರನ್ನು ಜಪ್ತಿ ಮಾಡುವಂತೆ ನ್ಯಾಯಾಲಯ ಆದೇಶಿಸಿದೆ.

ಕಲಬುರಗಿ ಜಿಲ್ಲಾ ಪ್ರಧಾನ ಸಿವಿಲ್ ನ್ಯಾಯಾಲಯದ ಹಿರಿಯ ಶ್ರೇಣಿ ನ್ಯಾಯಾಧೀಶರು ನೀಡಿದ ಆದೇಶದಂತೆ ಜಿಲ್ಲಾಧಿಕಾರಿಗಳ ಇನೋವಾ ಕ್ರಿಸ್ಟಾ ಕಾರು (ಕೆ.ಎ 32 ಜಿ 9990) ಜಪ್ತಿ ಮಾಡಲಾಗಿದೆ. ಪ್ರಕಾಶ್ ಮಲಕಪ್ಪ ಎಂಬವರ ಭೂಮಿಯನ್ನು ಸರ್ಕಾರ ಸ್ವಾಧೀನಪಡಿಸಿಕೊಂಡಿದ್ದರೂ, ನಿಗದಿತ ಅವಧಿಯಲ್ಲಿ ಪರಿಹಾರ ಹಣ ನೀಡಲಾಗಿಲ್ಲ ಎಂದು ಆರೋಪಿಸಿ ಅವರು ನ್ಯಾಯಾಲಯದ ಮೊರೆ ಹೋಗಿದ್ದರು.

ಇದನ್ನೂ ಓದಿ:

ಪ್ರಕರಣದ ಸುಧೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯ, ಪರಿಹಾರ ನೀಡುವಲ್ಲಿ ವಿಳಂಬವಾಗಿದೆ ಎಂದು ಪರಿಗಣಿಸಿ ಜಪ್ತಿ ಆದೇಶ ಹೊರಡಿಸಿದೆ. ನ್ಯಾಯಾಲಯದ ಆದೇಶದಂತೆ ಸಂಬಂಧಪಟ್ಟ ಅಧಿಕಾರಿಗಳು ಜಿಲ್ಲಾಧಿಕಾರಿಗಳ ಅಧಿಕೃತ ವಾಹನವನ್ನು ಜಪ್ತಿ ಮಾಡಿಕೊಂಡಿದ್ದಾರೆ. ಈ ಕ್ರಮ ಜಿಲ್ಲಾಡಳಿತ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !