ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, August 6, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ನಗರಸಭಾ ಕಚೇರಿಯಲ್ಲಿ ಅರ್ಜಿಗಳ ವಿಲೇವಾರಿ ವಿಳಂಬ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪ್ರತಿಭಟನೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಕೊಡಗು:

ನಗರಸಭಾ ಕಚೇರಿಯಲ್ಲಿ ಸಾರ್ವಜನಿಕರ ಅರ್ಜಿಗಳ ವಿಲೇವಾರಿ ವಿಳಂಬವಾಗುತ್ತಿದೆ ಎಂದು ಆರೋಪಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಪ್ರತಿಭಟನೆ ನಡೆಯಿತು.
ನಗರಸಭೆಯ ಪೌರಾಯುಕ್ತರ ಕಚೇರಿ ಎದುರು ಪ್ರತಿಭಟನೆ ನಡೆಸಿದ ನಗರಸಭೆಯ ಎಸ್‌ಡಿಪಿಐ ಸದಸ್ಯರು ಹಾಗೂ ಪಕ್ಷದ ಪ್ರಮುಖರು ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಆಸ್ತಿ ತೆರಿಗೆ ಕಡತಗಳು ಮತ್ತು ಇತರ ಸಾಮಾನ್ಯ ಅರ್ಜಿಗಳನ್ನು ಕೂಡಾ ಸಕಾಲದಲ್ಲಿ ವಿಲೇವಾರಿ ಮಾಡದೆ ಅರ್ಜಿದಾರರನ್ನು ಅಲೆದಾಡಿಸಲಾಗುತ್ತಿದೆ. ಕೋವಿಡ್ ಆತಂಕ ಮತ್ತು ಧಾರಾಕಾರ ಮಳೆಯ ನಡುವೆಯೇ ಸಾರ್ವಜನಿಕರು ನಿತ್ಯ ಬಂದು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಂಬಂಧಪಟ್ಟ ಸಿಬ್ಬಂದಿಗಳು ಸಾರ್ವಜನಿಕರ ಮನವಿಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿಲ್ಲ ಎಂದು ಸದಸ್ಯ ಅಮೀನ್ ಮೊಹಿಸಿನ್ ಆರೋಪಿಸಿದರು.
ಪೌರಾಯುಕ್ತ ರಾಮದಾಸ್ ಅವರನ್ನು ತರಾಟೆಗೆ ತೆಗೆದುಕೊಂಡ ಪ್ರತಿಭಟನಾಕಾರರು, ಕಚೇರಿಗೆ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿದರು.
ಈ ಸಂದರ್ಭ ಮಾತನಾಡಿದ ಪೌರಾಯುಕ್ತರು ಮಳೆಗಾಲದ ಪರಿಸ್ಥಿತಿಯನ್ನು ಎದುರಿಸಲು ಕೆಲವು ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಇವರುಗಳು ಬಂದ ನಂತರ ಕಡತ ವಿಲೇವಾರಿ ಸಮರ್ಪಕವಾಗಿ ನಡೆಯಲಿದೆ ಎಂದು ಸ್ಪಷ್ಟನೆ ನೀಡಿದರು.
ನಗರಸಭಾ ಸದಸ್ಯರಾದ  ಎಂ.ಕೆ.ಮನ್ಸೂರ್, ನೀಮಾ ಅರ್ಷದ್, ಮೇರಿ ವೇಗಸ್, ಬಷೀರ್ ಹಾಗೂ ಎಸ್‌ಡಿಪಿಐ ನಗರ ಸಮಿತಿಯ ಪ್ರಮುಖರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss