ರಾಜ್ಯದಲ್ಲಿ ಮುಂಗಾರು ವಿಳಂಬ, ಇದ್ರಿಂದ ವಿದ್ಯುತ್ ಉತ್ಪಾದನೆ ಮೇಲೆ ಪರಿಣಾಮ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಮುಂಗಾರು ವಿಳಂಬವಾಗಿದೆ, ಆದರೆ ಇದರಿಂದಾಗಿ ವಿದ್ಯುತ್ ಉತ್ಪಾದನೆಗೆ ಸಮಸ್ಯೆಯಾಗಿದೆಯಾ ಎನ್ನುವ ಪ್ರಶ್ನೆಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಉತ್ತರ ನೀಡಿದ್ದಾರೆ.

ರಾಜ್ಯದಲ್ಲಿ ಮುಂಗಾರು ವಿಳಂಬವಾಗಿದ್ದರೂ ವಿದ್ಯುತ್ ಉತ್ಪಾದನೆಯಲ್ಲಿ ಯಾವುದೇ ಸಮಸ್ಯೆ ಕಾಣಿಸಿಲ್ಲ. ಮುಂದಿನ ದಿನಗಳಲ್ಲಿ ಮಳೆಯಾಗಬಹುದು ಎಲ್ಲವೂ ಸರಿಯಾಗಲಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಸಾಕಷ್ಟು ಶಾಖೋತ್ಪನ್ನ ಕೇಂದ್ರಗಳಿವೆ, ಇವುಗಳನ್ನು ಬಲಪಡಿಸಬೇಕಿದೆ, ನವೀಕರಿಸಬಹುದಾದ ಇಂಧನ ಉತ್ಪಾದನೆಗೆ ಒತ್ತು ನೀಡಬೇಕಿದೆ. ನಮ್ಮ ರಾಜ್ಯದಲ್ಲಿ ಕಲ್ಲಿದ್ದಲ ಕೊರತೆ ಇಲ್ಲ. ಕಲ್ಲಿದ್ದಲ ಗುಣಮಟ್ಟದ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕಿದೆ.

ಇದರ ಜೊತೆಗೆ ಸೌರ ವಿದ್ಯುತ್ ಬಗ್ಗೆ ಹೆಚ್ಚು ಜಾಗೃತಿ ಅಗತ್ಯವಿದೆ, ಇನ್ನು ಎಲೆಕ್ಟ್ರಿಕ್ ವಾಹನಗಳ ಮಾರಾಟ ಏಕಾಏಕಿ ಹೆಚ್ಚಳವಾಗಿದೆ, ಜನರು ಎಲೆಕ್ಟ್ರಿಕ್ ಸ್ಕೂಟರ್ ಹಾಗೂ ಕಾರುಗಳನ್ನು ಕೊಂಡುಕೊಳ್ಳುತ್ತಿದ್ದಾರೆ. ಹಾಗಾಗಿ ಚಾರ್ಜಿಂಗ್ ಸ್ಟೇಷನ್‌ಗಳನ್ನು ಹೆಚ್ಚು ಮಾಡಬೇಕಿದೆ, ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!