September 21, 2026
Monday, September 21, 2026
spot_img

ಸೋಮಲಿಂಗಪ್ಪ ನೇತೃತ್ವದ ನಿಯೋಗದಿಂದ ಎಚ್‌ಡಿಕೆ ಭೇಟಿ: ನೆನೆಗುದಿಗೆ ಬಿದ್ದ ಯೋಜನೆಗಳ ಅನುಷ್ಠಾನಕ್ಕೆ ಒತ್ತಾಯ

ಹೊಸದಿಗಂತ ವರದಿ ಬಳ್ಳಾರಿ:

ಬಳ್ಳಾರಿ ಮಾರ್ಗವಾಗಿ ಸಿರುಗುಪ್ಪ ಮತ್ತು ಲಿಂಗಸುಗೂರು ಮಾರ್ಗದ ರೈಲ್ವೆ ಸೌಲಭ್ಯವನ್ನು ಕಲ್ಪಿಸಬೇಕು, ನಮ್ಮ ಭಾಗದಲ್ಲಿ ನೆನೆಗುದಿಗೆ ಬಿದ್ದ ಎಲ್ಲ ಯೋಜನೆಗಳನ್ನು ಕೂಡಲೇ ಅನುಷ್ಠಾನಕ್ಕೆ ತರಬೇಕು ಎಂದು ಒತ್ತಾಯಿಸಿ ಸಿರುಗುಪ್ಪ ಕ್ಷೇತ್ರದ ಮಾಜಿ ಶಾಸಕ ಎಂ.ಎಸ್.ಸೋಮಲಿಂಗಪ್ಪ ಅವರ ನೇತೃತ್ವದ ನಿಯೋಗ ಕೇಂದ್ರ ಸಚಿವ ಎಚ್ .ಡಿ. ಕುಮಾರಸ್ವಾಮಿ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.

ನವ ದೆಹಲಿಯಲ್ಲಿ ಸಚಿವರನ್ನು ಭೇಟಿ ಮಾಡಿದ ರೈಲ್ವೆ ಕ್ರಿಯಾ ಸಮಿತಿಯ ನಿಯೋಗ ನಾನಾ ಬೇಡಿಕೆಗಳ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಿರುಗುಪ್ಪ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಂ.ಎಸ್. ಸೋಮಲಿಂಗಪ್ಪ ಸೇರಿದಂತೆ ಅನೇಕ ಗಣ್ಯರು, ರೈಲ್ವೆ ಕ್ರಿಯಾ ಸಮಿತಿಯ ಮಹೇಶ್ವರ ಸ್ವಾಮಿ, ವಿವಿಧ ಮುಖಂಡರು, ಕಾರ್ಯಕರ್ತರು, ಸಿರುಗುಪ್ಪ ಕ್ಷೇತ್ರದ ಪ್ರಮುಖರು ಇತರರಿದ್ದರು. ಸಚಿವರು ನಿಯೋಗದ ಬೇಡಿಕೆಗಳಿಗೆ ಸ್ಪಂಧಿಸಲಾಗುವುದು ಎಂದು ಭರವಸೆ ನೀಡಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !