ಹೊಸ ದಿಗಂತ ವರದಿ, ಮಂಡ್ಯ :
ಸರ್ಕಾರಿ ಸ್ವಾಮ್ಯದಲ್ಲೇ ಮೈಷುಗರ್ ಆರಂಭಿಸುವಂತೆ ಒತ್ತಾಯಿಸಿ ಶೀಘ್ರ ರೈತರು, ಹೋರಾಟಗಾರರ ನಿಯೋಗ ವಿಧಾನಸೌಧಕ್ಕೆ ತೆರಳಿ, ಮುಖ್ಯಮಂತ್ರಿಗಳು ಜನಪ್ರತಿನಿಧಿಗಳ ಮೇಲೆ ಒತ್ತಡ ಹೇರಲಾಗುವುದು ಎಂದು ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಸಂಘಟನಾ ಕಾರ್ಯದರ್ಶಿ ಸುನಂದಾ ಜಯರಾಂ ತಿಳಿಸಿದರು.
ಸುದ್ಧಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮೈಷುಗರ್ ಸಕ್ಕರೆ ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದಲ್ಲೇ ಪ್ರಾರಂಭಿಸುವ ಬಗ್ಗೆ ಯಾವುದೇ ಪ್ರಸ್ತಾಪನೆ ಮಾಡಿಲ್ಲಘಿ. ಈಗಾಗಲೇ ಜಿಲ್ಲಾದ್ಯಂತ ಕೆಲ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪಘಿ, ಉಸ್ತುವಾರಿ ಸಚಿವ ಕೆ.ಸಿ. ನಾರಾಯಣಗೌಡ ವಿಪಕ್ಷ ನಾಯಕ ಸಿದ್ದರಾಮಯ್ಯಘಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಜಿಲ್ಲೆಯ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸ ಯಾವುದೇ ಕಾರಣಕ್ಕೂ ಖಾಸಗಿ ಅಥವಾ ಓ ಅಂಡ್ ಎಂ ಮಾದರಿಯಲ್ಲಿ ಕಾರ್ಖಾನೆ ನಡೆಸುವುದನ್ನು ಬಿಟ್ಟು ಸರ್ಕಾರಿ ಸ್ವಾಮ್ಯದಲ್ಲೇ ಉಳಿಸುವಂತೆ ಒತ್ತಾಸಿದ್ದೇವೆ. ಆದರೂ ಮುಖ್ಯಮಂತ್ರಿ ಯಡಿಯೂರಪ್ಪ ಬಜೆಟ್ನಲ್ಲಿ ಪ್ರಸ್ತಾಪಿಸದೆ ಜಿಲ್ಲೆಯ ಜನರಿಗೆ ದ್ರೋಹವೆಸಗಿದ್ದಾರೆ ಎಂದು ದೂರಿದರು.
ಜವಾಬ್ದಾರಿಯಿಂದ ನಡೆದುಕೊಳ್ಳಲಿ
ಜಿಲ್ಲಾ ಉಸ್ತುವಾರಿ ಸಚಿವರು ಒಂದೊಂದು ಕಡೆ ಒಂದೊಂದು ರೀತಿಯ ಹೇಳಿಕೆಗಳನ್ನು ನೀಡುತ್ತಾ ಗೊಂದಲ ಮೂಡಿಸುತ್ತಿದ್ದಾರೆ. ಜಿಲ್ಲೆಯ ಜನರ ಋಣ ತೀರಿಸುವ ಜವಾಬ್ದಾರಿ ಅವರ ಮೇಲಿದೆ. ಮೈಷುಗರ್ ಕಾರ್ಖಾನೆ ಬಗ್ಗೆ ಈ ಹಿಂದೆ ಓ ಅಂಡ್ ಎಂ ಮಾದರಿ ನಿರ್ವಹಣೆಗೆ ಸರ್ಕಾರ ಚಿಂತನೆ ನಡೆಸಿದೆ ಎಂದಿದ್ದರು. ಈಗ ಖಾಸಗೀಕರಣದ ಬಗೆ ಮಾತನಾಡುತ್ತಾರೆ. ಜಿಲ್ಲಾ ಉಸ್ತುವಾರಿ ಸಚಿವರ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಧೋರಣೆ ಬದಲಿಸಲು ಸಂಸದರಿಗೆ ಸಲಹೆ
ಜಿಲ್ಲೆಯ ಜನತೆ ಸ್ವಾಭಿಮಾನದ ಸಂಕೇತವಾಗಿ ಸುಮಲಾ ಅವರನ್ನು ಸಂಸದರನ್ನಾ ಆಯ್ಕೆ ಮಾಡಿದ್ದಾರೆ. ಜಿಲ್ಲೆಯ ಜನರ ವಿಶ್ವಾಸಕ್ಕೆ ಧಕ್ಕೆ ಬಾರದಂತೆ ನಡೆದುಕೊಳ್ಳಬೇಕು. ಮೈಷುಗರ್ ಕಾರ್ಖಾನೆಯನ್ನು ಖಾಸಗೀಕರಣ ಮಾಡುವ ಧೋರಣೆ ಬದಲಿಸಿ ಸರ್ಕಾರಿ ಸ್ವಾಮ್ಯದಲ್ಲೇ ನಡೆಸುವ ಮೂಲಕ ಜನರ ಋಣ ತೀರಿಸಬೇಕು ಎಂದು ಸಲಹೆ ನೀಡಿದರು.
ಸಿಐಟಿಯುನ ಸಿ. ಕುಮಾರಿ ಮಾತನಾಡಿ, ಉದ್ದಿಮೆಗಳ ಸ್ಥಾಪನೆ, ಅಭಿವೃದ್ಧಿಗಾಗಿ ಬಜೆಟ್ನಲ್ಲಿ 52,519 ಕೋಟಿ ರೂ.ಗಳನ್ನು ಮೀಸರಿಸಲಾಗಿದೆ. ಇದರಲ್ಲಿ ಮೈಷುಗರ್ ಪುನಶ್ಚೇತನಕ್ಕೆ ಅನುದಾನ ನೀಡಲಾಗುವುದಿಲ್ಲವೇ ಎಂದು ಪ್ರಶ್ನಿಸಿದರು.