ಬೆಂಕಿ ಕೆನ್ನಾಲಿಗೆಗೆ ಕಟ್ಟಡ ಕುಸಿತ: ಸ್ಥಳಕ್ಕೆ 18 ಅಗ್ನಿಶಾಮಕ ವಾಹನ ದೌಡು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಎ2 ಅಂತಸ್ತಿನ ಕಟ್ಟಡ ಕುಸಿದಿರುವ ಘಟನೆ ದೆಹಲಿಯ ಬದರ್‌ಪುರ ಪ್ರದೇಶದಲ್ಲಿ ಇಂದು ಬೆಳಗ್ಗೆ ನಡೆದಿದೆ.

ಘಟನಾ ಸ್ಥಳಕ್ಕೆ ಬೆಂಕಿ ನಂದಿಸಲು 18 ಅಗ್ನಿಶಾಮಕ ವಾಹನಗಳು ದಾಡಾಯಿಸಿವೆ. ಬೆಂಕಿ ಅವಘಡ ಸಂಭವಿಸಿದ ಕಟ್ಟಡದ ನೆಲ ಮಹಡಿಯಲ್ಲಿ ಗೋಡೌನ್ ಇತ್ತು ಎಂದು ತಿಳಿದುಬಂದಿದೆ.

ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ ಮತ್ತು ಬೆಂಕಿಯನ್ನು ನಂದಿಸಲು ಕಾರ್ಯಾಚರಣೆಗಳು ನಡೆಯುತ್ತಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!