Sunday, December 3, 2023

Latest Posts

ಕಳಪೆ ಮಟ್ಟ ತಲುಪಿದ ದೆಹಲಿ‌ ವಾಯು ಮಾಲಿನ್ಯ: ನವೆಂಬರ್‌ 10ರವರೆಗೆ ಶಾಲೆಗಳು ಬಂದ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಷ್ಟ್ರ ರಾಜಧಾನಿಯಲ್ಲಿ ಅಪಾಯಕಾರಿ ವಾಯು ಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು ನವೆಂಬರ್ 10ರವರೆಗೆ ಪ್ರಾಥಮಿಕ ಶಾಲೆಗಳನ್ನು ಮುಚ್ಚಲು ಸರ್ಕಾರ ನಿರ್ಧರಿಸಿದೆ. ಈ ಕುರಿತು ಆದೇಶ ಹೊರಡಿಸಿದ ದೆಹಲಿ ಶಿಕ್ಷಣ ಸಚಿವೆ ಅತಿಶಿ, 6 ರಿಂದ 12 ನೇ ತರಗತಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿಗಳನ್ನು ನಡೆಸುವಂತೆ ಸೂಚಿಸಲಾಗಿದೆ.

ದೆಹಲಿಯಲ್ಲಿ ವಾಯುಮಾಲಿನ್ಯ ತೀವ್ರ ಮಟ್ಟ ತಲುಪಿದ್ದು, ಜನರ ಆರೋಗ್ಯದ ದೃಷ್ಟಿಯಿಂದ ಇಂತಹ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಈ ಮಾಲಿನ್ಯವು ವಿಶೇಷವಾಗಿ ಮಕ್ಕಳಿಗೆ ತುಂಬಾ ಹಾನಿಕಾರಕವಾಗಿದೆ. ವಾಯು ಮಾಲಿನ್ಯದ ದೃಷ್ಟಿಯಿಂದ, ದೆಹಲಿ ಸರ್ಕಾರವು ನವೆಂಬರ್ 10ರವರೆಗೆ ದೆಹಲಿಯ ಎಲ್ಲಾ ಪ್ರಾಥಮಿಕ ಶಾಲೆಗಳನ್ನು ಮುಚ್ಚಲು ನಿರ್ಧರಿಸಿದೆ.

https://twitter.com/AtishiAAP/status/1721023652177563976

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!