ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ನಾಯಕ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಪ್ರಚಾರ ಮಾಡುವಾಗ ಜನವರಿ 23 ರಿಂದ ರಾಷ್ಟ್ರ ರಾಜಧಾನಿಯಲ್ಲಿ 14 ಚುನಾವಣಾ ರ್ಯಾಲಿಗಳು ಮತ್ತು ಸಾರ್ವಜನಿಕ ಕಾರ್ಯಕ್ರಮಗಳನ್ನು ನಡೆಸಲಿದ್ದಾರೆ.
ದೆಹಲಿ ಬಿಜೆಪಿಯ ಉನ್ನತ ಮೂಲಗಳ ಪ್ರಕಾರ, “ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರು ದೆಹಲಿಯಲ್ಲಿ ಬಿಜೆಪಿ ಪರ ಪ್ರಚಾರದಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಾರೆ. ಯೋಗಿ 14 ರ್ಯಾಲಿಗಳು ಮತ್ತು ಸಾರ್ವಜನಿಕ ಕಾರ್ಯಕ್ರಮಗಳನ್ನು ನಡೆಸಲಿದ್ದಾರೆ.
ಘೋಂಡಾ, ಶಹದ್ರಾ, ದ್ವಾರಕಾ, ಬಿಜ್ವಾಸನ್, ಪಾಲಂ, ರಾಜೇಂದರ್ ನಗರ, ಪಟೇಲ್ ನಗರ ಮತ್ತು ಇತರ ಪ್ರದೇಶಗಳಲ್ಲಿ ಯುಪಿ ಸಿಎಂ ಪ್ರಚಾರ ನಡೆಸಲಿದ್ದಾರೆ. ಈ ಪ್ರದೇಶಗಳು ಯುಪಿ ಹಿನ್ನೆಲೆಯ ಜನರಿಂದ ಕೂಡಿದೆ ಎಂದು ಹೇಳಲಾಗುತ್ತದೆ.