ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ.
ನವದೆಹಲಿ ವಿಧಾನಸಭಾ ಕ್ಷೇತ್ರದಲ್ಲಿ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ವಿರುದ್ಧ ಪಕ್ಷವು ಪರ್ವೇಶ್ ವರ್ಮಾ ಅವರನ್ನು ಕಣಕ್ಕಿಳಿಸಿದೆ.
ಬಿಜೆಪಿಯು ಕರೋಲ್ ಬಾಗ್‌ನಲ್ಲಿ ದುಶ್ಯಂತ್ ಗೌತಮ್, ರಾಜೌರಿ ಗಾರ್ಡನ್‌ನಲ್ಲಿ ಮಂಜಿಂದರ್ ಸಿಂಗ್ ಸಿರ್ಸಾ, ಬಿಜ್ವಾಸನ್‌ನಲ್ಲಿ ಕೈಲಾಶ್ ಗೆಹ್ಲೋಟ್ ಮತ್ತು ಗಾಂಧಿ ನಗರದಲ್ಲಿ ಅರವಿಂದರ್ ಸಿಂಗ್ ಲವ್ಲಿ ಅವರನ್ನು ಕಣಕ್ಕಿಳಿಸಿದೆ.
70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಚುನಾವಣೆಗೆ 29 ಅಭ್ಯರ್ಥಿಗಳ ಪಟ್ಟಿಯಲ್ಲಿ ಬಿಜೆಪಿ, ಮುಖ್ಯಮಂತ್ರಿ ಅತಿಶಿ ವಿರುದ್ಧ ಕಲ್ಕಾಜಿಯಲ್ಲಿ ಮಾಜಿ ಸಂಸದ ರಮೇಶ್ ಬಿಧುರಿ ಅವರನ್ನು ಹೆಸರಿಸಿದೆ.
ಜನಕಪುರಿಯಲ್ಲಿ ಆಶಿಶ್ ಸೂದ್ ಅವರನ್ನು ಪಕ್ಷ ಕಣಕ್ಕಿಳಿಸಿದೆ. ದೆಹಲಿ ಬಿಜೆಪಿ ಮಾಜಿ ಅಧ್ಯಕ್ಷ ಸತೀಶ್ ಉಪಾಧ್ಯಾಯ ಮಾಳವೀಯ ನಗರದಲ್ಲಿ ಚುನಾವಣೆ ಎದುರಿಸಲಿದ್ದಾರೆ.