August 16, 2026
Sunday, August 16, 2026
spot_img

ದೆಹಲಿ ಸ್ಫೋಟ ಪ್ರಕರಣ: ಹರಿಯಾಣ ಸರ್ಕಾರದ ಸುಪರ್ದಿಗೆಗೆ ಅಲ್-ಫಲಾಹ್ ವಿವಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿ ಕೆಂಪುಕೋಟೆ ಬಳಿ ನಡೆದ ಭೀಕರ ಸ್ಫೋಟ ಪ್ರಕರಣದ ತನಿಖೆಯಲ್ಲಿ ಅಲ್-ಫಲಾಹ್ ವಿಶ್ವವಿದ್ಯಾಲಯದ ಹೆಸರು ಹೊರಬಂದ ಹಿನ್ನೆಲೆ, ಹರಿಯಾಣ ಸರ್ಕಾರ ತಕ್ಷಣವೇ ಕಠಿಣ ಕ್ರಮ ಕೈಗೊಂಡಿದೆ. ವಿವಿಯನ್ನು ತನ್ನ ಸುಪರ್ದಿಗೆ ಪಡೆದು ಆಡಳಿತವನ್ನು ನೇರವಾಗಿ ವಹಿಸಿಕೊಂಡಿದೆ.

ತನಿಖೆಯಲ್ಲಿ ವಿಶ್ವವಿದ್ಯಾಲಯದ ಕಾರ್ಯವಿಧಾನದಲ್ಲಿ ಗಂಭೀರ ಅಕ್ರಮಗಳು ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಹಿರಿಯ ಐಎಎಸ್ ಅಧಿಕಾರಿ ಅಮಿತ್ ಅಗರ್ವಾಲ್ ಅವರನ್ನು ಆಡಳಿತಾಧಿಕಾರಿಯಾಗಿ ನೇಮಿಸಲಾಗಿದೆ. ಅವರು ಈಗ ಹಣಕಾಸು ಮತ್ತು ಆಡಳಿತ ವ್ಯವಸ್ಥೆಯನ್ನು ನೋಡಿಕೊಳ್ಳಲಿದ್ದಾರೆ.

ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಯಾವುದೇ ತೊಂದರೆ ಆಗದಂತೆ, ಜೆಸಿ ಬೋಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಿಂದ ತಂಡವನ್ನು ನಿಯೋಜಿಸಲಾಗಿದೆ. ಪ್ರಮುಖ ಹುದ್ದೆಗಳನ್ನು ತಾತ್ಕಾಲಿಕವಾಗಿ ಭರ್ತಿ ಮಾಡಲಾಗಿದೆ.

ಇದನ್ನೂ ಓದಿ:

ಕಳೆದ ವರ್ಷ ನಡೆದ ಸ್ಫೋಟದಲ್ಲಿ ವಿವಿಯ ಕೆಲ ಸಿಬ್ಬಂದಿಯ ಪಾತ್ರ ಬೆಳಕಿಗೆ ಬಂದಿದ್ದು, ಈಗಾಗಲೇ ಬಂಧನಗಳೂ ನಡೆದಿವೆ. ಈ ಬೆಳವಣಿಗೆ ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲ್ವಿಚಾರಣೆಯನ್ನು ಮತ್ತಷ್ಟು ಕಠಿಣಗೊಳಿಸಲು ಕಾರಣವಾಗಿದೆ.

ಹೊಸ ನಿಯಮಗಳ ಪ್ರಕಾರ, ನಿಯಮ ಉಲ್ಲಂಘನೆ ಕಂಡುಬಂದರೆ ಭಾರೀ ದಂಡದಿಂದ ಹಿಡಿದು ಸಂಸ್ಥೆಯ ವಿಸರ್ಜನೆವರೆಗೆ ಕ್ರಮ ಕೈಗೊಳ್ಳುವ ಅಧಿಕಾರ ಸರ್ಕಾರಕ್ಕಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !