Monday, November 17, 2025

ದೆಹಲಿ ಸ್ಫೋಟ ಪ್ರಕರಣ: ವಿಚಾರಣೆ ನಡೆಸಿ ಮೂವರು ವೈದ್ಯರು ಸೇರಿ ನಾಲ್ವರನ್ನು ಬಿಡುಗಡೆ ಮಾಡಿದ NIA

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿ ಸ್ಫೋಟ ಪ್ರಕರಣದಲ್ಲಿ ವಶಕ್ಕೆ ಪಡೆದ ಮೂವರು ವೈದ್ಯರು ಸೇರಿದಂತೆ ನಾಲ್ವರನ್ನು NIA ಅಧಿಕಾರಿಗಳು ಬಿಡುಗಡೆ ಮಾಡಿದ್ದಾರೆ.

ಬಿಡುಗಡೆಯಾದವರನ್ನು ಡಾ.ರೆಹಾನ್, ಡಾ.ಮೊಹಮ್ಮದ್, ಡಾ.ಮುಸ್ತಕೀಮ್ ಮತ್ತು ರಸಗೊಬ್ಬರ ವ್ಯಾಪಾರಿ ದಿನೇಶ್ ಸಿಂಗ್ಲಾ ಎಂದು ಗುರುತಿಸಲಾಗಿದೆ. ಇವರನ್ನು ಹರಿಯಾಣದ ನುಹ್‌ನಲ್ಲಿ ವಶಕ್ಕೆ ಪಡೆಯಲಾಗಿತ್ತು. ಸ್ಫೋಟದ ರುವಾರಿ ಉಮರ್ ಜೊತೆ ಸಂಪರ್ಕ ಹೊಂದಿದ್ದರು ಮತ್ತು ಭಯೋತ್ಪಾದಕ ಚಟುವಟಿಕೆಗಳಿಗೆ ಸಂಬಂಧಿಸಿರುವ ಅಲ್-ಫಲಾಹ್ ವಿಶ್ವವಿದ್ಯಾಲಯದೊಂದಿಗೆ ಸಂಬಂಧ ಹೊಂದಿದ್ದರು ಎಂಬ ಶಂಕೆಯ ಮೇಲೆ ಇವರನ್ನು ವಶಕ್ಕೆ ಪಡೆಯಲಾಗಿತ್ತು. ಬಳಿಕ ಈ ನಾಲ್ವರನ್ನು ಮೂರು ದಿನಗಳ ಕಾಲ ವಿಚಾರಣೆ ನಡೆಸಲಾಗಿತ್ತು.

ವಿಚಾರಣೆ ಬಳಿಕ ಕೆಂಪು ಕೋಟೆ ಸ್ಫೋಟದ ಪ್ರಮುಖ ಆರೋಪಿ ಡಾ. ಉಮರ್ ಉನ್ ನಬಿಯೊಂದಿಗೆ ಸಂಪರ್ಕದಲ್ಲಿದ್ದರು ಎಂಬುದಕ್ಕೆ ಯಾವುದೇ ದೃಢವಾದ ಪುರಾವೆಗಳು ಸಿಗದ ಕಾರಣ ಅವರನ್ನು ಬಿಡುಗಡೆ ಮಾಡಲಾಗಿದೆ. ಕುಟುಂಬಗಳು ಅವರ ಬಿಡುಗಡೆಯನ್ನು ದೃಢಪಡಿಸಿವೆ. ಈ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ನೀಡಲು ಕುಟುಂಬಸ್ಥರು ನಿರಾಕರಿಸಿದ್ದಾರೆ.

error: Content is protected !!