ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯ ಕೆಂಪು ಕೋಟೆ ಬಳಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟವರಿಗೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸಂತಾಪ ಸೂಚಿಸಿದ್ದಾರೆ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಸೋಮವಾರ ಸಂಜೆ ರಾಷ್ಟ್ರ ರಾಜಧಾನಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಕಾರೊಂದರಲ್ಲಿ ತೀವ್ರ ಸ್ಫೋಟ ಸಂಭವಿಸಿ ಒಂಬತ್ತು ಜನರು ಸಾವನ್ನಪ್ಪಿದರು. ಹಲವಾರು ವಾಹನಗಳು ಸುಟ್ಟುಹೋದ ಈ ಸ್ಫೋಟದಲ್ಲಿ ಇಪ್ಪತ್ತು ಜನರು ಗಾಯಗೊಂಡಿದ್ದಾರೆ.

