ದೆಹಲಿ ಬಜೆಟ್: 5 ವರ್ಷಗಳಲ್ಲಿ 20 ಲಕ್ಷ ಉದ್ಯೋಗ ಸೃಷ್ಟಿಸುವ ಗುರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್

ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯ ಇಂದು 75,800 ಕೋಟಿ ರೂ. ಮೌಲ್ಯದ 2022- 23ನೇ ಸಾಲಿನ ಬಜೆಟ್ ಅನ್ನು ಮಂಡಿಸಿದರು. ಈ ಬಜೆಟ್ ಕೊರೋನಾದಿಂದ ಕುಂಠಿತಗೊಂಡಿದ್ದ ಆರ್ಥಿಕತೆಗೆ ಪುನಶ್ಚೇತನ ನೀಡಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಬಜೆಟ್ ಆಮ್ ಆದ್ಮಿ ಪಾರ್ಟಿ ‘ರೋಜ್ಗಾರ್ ಬಜೆಟ್’ ಎಂದು ಕರೆದುಕೊಂಡಿದೆ.
ಮುಂದಿನ 5 ವರ್ಷಗಳಲ್ಲಿ ರಾಜ್ಯದಲ್ಲಿ 20 ಲಕ್ಷ ಉದ್ಯೋಗಗಳನ್ನು ಸೃಷ್ಟಿಸಲಿದೆ ಎನ್ನುವ ಭರವಸೆಯನ್ನು ಸಿಸೋಡಿಯ ಅವರು ವ್ಯಕ್ತಪಡಿಸಿದ್ದಾರೆ.
ಕಳೆದ ವರ್ಷ ಸಿಸೋಡಿಯ ಅವರು 69,000 ಕೋಟಿ ಮೊತ್ತದ ಬಜೆಟ್ ಮಂಡಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!