ದೆಹಲಿಯಲ್ಲಿ ಭೀಕರ ಅಗ್ನಿದುರಂತ: 27 ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು 27 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ದೆಹಲಿಯ ಮುಂಡ್ಕಾ ಮೆಟ್ರೋ ನಿಲ್ದಾಣದ ಬಳಿಯ ನಾಲ್ಕು ಅಂತಸ್ತಿನ ವಾಣಿಜ್ಯ ಕಟ್ಟಡ ದಲ್ಲಿ ದುರಂತ ನಡೆದಿದ್ದು ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಬಹುದೆಂದು ಊಹಿಸಲಾಗಿದೆ.

ಶುಕ್ರವಾರ ಸಂಜೆ ಸುಮಾರು 4.40 ರ ಹೊತ್ತಿಗೆ ಬೆಂಕಿ ಕಾಣಿಸಿಕೊಂಡಿದ್ದು ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಕಟ್ಟಡದಲ್ಲಿ ಸಿಸಿಟಿವಿಗಳು, ವೈಫೈ ರೂಟರ್‌ಗಳು ಮತ್ತು ಇತರ ವಿದ್ಯುತ್ ಉಪಕರಣಗಳನ್ನು ತಯಾರಿಸಲಾಗುತ್ತಿತ್ತು ಎನ್ನಲಾಗಿದ್ದು ಜನರೇಟರ್‌ ಕೊಠಡಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದ್ದು ನಂತರದಲ್ಲಿ ಎರಡನೇ ಮತ್ತು ಮೂರನೇ ಮಹಡಿಗೆ ವ್ಯಾಪಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚೆಗೆ ದೇಶದಲ್ಲಿ ಸಂಭವಿಸಿದ ಅತಿ ಭೀಕರ ದುರಂತ ಇದು ಎನ್ನಲಾಗಿದ್ದು ““ಈ ದುರಂತ ಘಟನೆಯ ಬಗ್ಗೆ ತಿಳಿದು ನೋವಾಗಿದೆ. ಅಧಿಕಾರಿಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇನೆ. ನಮ್ಮ ಕೆಚ್ಚೆದೆಯ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಿಸಲು ಮತ್ತು ಜೀವಗಳನ್ನು ಉಳಿಸಲು ಪ್ರಯತ್ನಿಸುತ್ತಿದ್ದಾರೆ. ದೇವರು ಎಲ್ಲರನ್ನೂ ಆಶೀರ್ವದಿಸಲಿ” ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

“ದೆಹಲಿಯಲ್ಲಿ ಸಂಭವಿಸಿದ ಬೆಂಕಿ ದುರಂತದಿಂದಾಗಿ ತುಂಬಾ ದುಃಖವಾಗಿದೆ. ನನ್ನ ಮನಸ್ಸು ದುಃಖಿತ ಕುಟುಂಬಗಳೊಂದಿಗೆ ಇವೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ” ಎಂದು ಪ್ರಧಾನಿ ನರೇಂದ್ರ ಮೋದಿ ರಾತ್ರಿ ಟ್ವೀಟ್ ಮಾಡಿದ್ದಾರೆ. ಪ್ರಧಾನಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ಪ್ರಾಣ ಕಳೆದುಕೊಂಡವರ ಸಂಬಂಧಿಕರಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಪರಿಹಾರ ಘೋಷಿಸಲಾಗಿದೆ. ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ರವರ ಅಧಿಕೃತ ಟ್ವೀಟರ್‌ ಹ್ಯಾಂಡಲ್‌ ನಲ್ಲೂ ಸಂತಾಪ ಸೂಚಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!