ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಂಘಟಿತ ಬೌಲಿಂಗ್ ಬ್ಯಾಟಿಂಗ್ ಪ್ರದರ್ಶನದ ನೆರವಿನೊಂದಿಗೆ ಪಂಜಾಬ್ ಕಿಂಗ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಆರು ವಿಕೆಟ್‌ಗಳ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ 18ನೇ ಆವೃತ್ತಿಗೆ ವಿದಾಯ ಹೇಳಿದೆ.
ಆದ್ರೆ 13 ಪಂದ್ಯಗಳಲ್ಲಿ 8 ಗೆಲುವಿನೊಂದಿಗೆ 17 ಅಂಕ ಪಡೆದಿರುವ ಪಂಜಾಬ್ 2ನೇ ಸ್ಥಾನ ಕಾಯ್ದುಕೊಂಡಿದೆ.
ಸವಾಯಿ ಮಾನಸಿಂಗ್ ಕ್ರೀಡಾಂಗಣದಲ್ಲಿ ನಡೆದ 66ನೇ ಐಪಿಎಲ್ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಫೀಲ್ಡಿಂಗ್ ಆಯ್ದುಕೊಂಡಿತು.
ಮೊದಲಿಗೆ ಬ್ಯಾಟ್ ಮಾಡಿದ ಪಂಜಾಬ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 206 ರನ್ ಗಳಿಸಿತು. ಈ ಮೂಲಕ ಡೆಲ್ಲಿಗೆ 207 ರನ್‌ಗಳ ಗುರಿ ನೀಡಿತು. ಪಂಜಾಬ್ ತಂಡ ನೀಡಿದ ಗುರಿ ಬೆನ್ನಟ್ಟಿದ ಡೆಲ್ಲಿ 19.3 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 208 ರನ್ ಗಳಿಸಿ ಗೆಲುವು ಸಾಧಿಸಿದೆ.