ಗುಜರಾತ್ ವಿರುದ್ಧ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 32ನೇ ಪಂದ್ಯದಲ್ಲಿಂದು ಗುಜರಾತ್ ಟೈಟಾನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ರಿಷಭ್ ಪಂತ್ ಮೊದಲು ಬೌಲಿಂಗ್ ಆಯ್ಕೆಮಾಡಿಕೊಂಡಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಡೇವಿಡ್ ವಾರ್ನರ್ ಬದಲಿಗೆ ಸುಮಿತ್ ಕುಮಾರ್ ತಂಡ ಕೂಡಿಕೊಂಡಿದ್ದಾರೆ. ಗುಜರಾತ್ ಟೈಟಾನ್ಸ್ ತಂಡದಲ್ಲಿ ಮೂರು ಬದಲಾವಣೆ ಮಾಡಲಾಗಿದ್ದು, ವೃದ್ದಿಮಾನ್ ಸಾಹ, ಡೇವಿಡ್ ಮಿಲ್ಲರ್ ಹಾಗೂ ಸಂದೀಪ್ ವಾರಿಯರ್ ತಂಡಕೂಡಿಕೊಂಡಿದ್ದಾರೆ.

ಶುಭ್‌ಮನ್‌ ಗಿಲ್‌ ನಾಯಕತ್ವದೊಂದಿಗೆ ಕಣಕ್ಕಿಳಿದಿರುವ ಗುಜರಾತ್‌ ಟೈಟಾನ್ಸ್ 6ರಲ್ಲಿ ತಲಾ 3 ಗೆಲುವು, ಸೋಲು ಕಂಡಿದೆ. ಅತ್ತ ಡೆಲ್ಲಿ ಕ್ಯಾಪಿಟಲ್ಸ್ 6 ಪಂದ್ಯಗಳಲ್ಲಿ ಕೇವಲ 2 ಗೆಲುವು ಸಾಧಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!