ಲಕ್ನೋ ತೊರೆದ ಕೆ.ಎಲ್​ ರಾಹುಲ್​ ಗೆ ವೆಲ್ ಕಮ್ ಎಂದ ಡೆಲ್ಲಿ ಕ್ಯಾಪಿಟಲ್ಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲಕ್ನೋ ಸೂಪರ್​ ಜೈಂಟ್ಸ್​ ತಂಡ ತೊರೆದ ಕೆ.ಎಲ್​ ರಾಹುಲ್​ ಅವರನ್ನು ಮೆಗಾ ಹರಾಜಿನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​​ ತಂಡ ಖರೀದಿ ಮಾಡಿದೆ.

ಕೆ.ಎಲ್​ ರಾಹುಲ್​ ಖರೀದಿಗೆ ರಾಯಲ್​ ಚಾಲೆಂಜರ್ಸ್​ ಬೆಂಗಳೂರು, ಚೆನ್ನೈ ಸೂಪರ್​ ಕಿಂಗ್ಸ್​, ಕೆಕೆಆರ್​ ಮತ್ತು ಡೆಲ್ಲಿ ಕ್ಯಾಪಿಟಲ್ಸ್​ ಮಧ್ಯೆ ಪೈಪೋಟಿ ಏರ್ಪಟ್ಟಿತ್ತು. ಕೊನೆಗೂ ಡೆಲ್ಲಿ ಕ್ಯಾಪಿಟಲ್ಸ್​ ರಾಹುಲ್​ ಅವರನ್ನು 14 ಕೋಟಿ ನೀಡಿ ಖರೀದಿ ಮಾಡಿದೆ.

ಕೆಎಲ್ ರಾಹುಲ್ ಈ ಬಾರಿ ಮತ್ತೆ ಆರ್‌ಸಿಬಿ ತಂಡ ಸೇರಿಕೊಳ್ಳಲಿದ್ದಾರೆ ಅನ್ನೋ ಮಾತುಗಳು ಕೇಳಿಬಂದಿತ್ತು. ಇದಕ್ಕೆ ಪೂರಕವಾಗಿ ರಾಹುಲ್ ಕೂಡ ಪರೋಕ್ಷವಾಗಿ ಆರ್‌ಸಿಬಿ ಸೇರಿಕೊಳ್ಳುವ ಇಂಗಿತ ವ್ಯಕ್ತಪಡಿಸಿದ್ದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!