ಹೊಸದಿಗಂತ ಡಿಜಿಟಲ್ ಡೆಸ್ಕ್:
IPL 2025 ಮುಂದಿನ ವಾರ ಮರು ನಿಗದಿಯಾಗುವ ಸಾಧ್ಯತೆಯಿದೆ. ಅದು ಕೂಡ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯದೊಂದಿಗೆ ಎಂದು ತಿಳಿದುಬಂದಿದೆ.
ಧರ್ಮಶಾಲಾದಲ್ಲಿ ನಡೆದ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯವನ್ನು ಅರ್ಧದಲ್ಲೇ ಸ್ಥಗಿತಗೊಳಿಸಲಾಗಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ್ದ ಪಂಜಾಬ್ ಕಿಂಗ್ಸ್ ತಂಡವು 10.1 ಓವರ್ಗಳಲ್ಲಿ 122 ರನ್ ಗಳಿಸಿದ್ದ ವೇಳೆ ಪಂದ್ಯವನ್ನು ಸ್ಥಗಿತಗೊಳಿಸಲಾಯಿತು.
ಅದರಂತೆ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯವು ಮರು ನಿಗದಿಯಾಗುವ ಸಾಧ್ಯತೆ ಹೆಚ್ಚಿದೆ. ಅಲ್ಲದೆ ಈ ಪಂದ್ಯದೊಂದಿಗೆ ಐಪಿಎಲ್ಗೆ ಮತ್ತೆ ಚಾಲನೆ ದೊರೆಯಲಿದೆ.