Friday, December 26, 2025

ದೆಹಲಿ ಕಾರು ಸ್ಫೋಟ: ರಾಜ್ಯದಲ್ಲೂ ಭದ್ರತೆ ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿಯ ಕೆಂಪು ಕೋಟೆಯ ಮೆಟ್ರೋ ಸ್ಟೇಷನ್ ಬಳಿ ಇಂದು ಸಂಜೆ ಕಾರಿನಲ್ಲಿ ಸ್ಫೋಟ ಸಂಭವಿಸಿದ್ದು, ಈ ಘಟನೆ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಬೆಂಗಳೂರು, ಮೈಸೂರು ಸೇರಿ ರಾಜ್ಯದ ಪ್ರಮುಖ ನಗರಗಳಲ್ಲಿ ಭದ್ರತೆ ಹೆಚ್ಚಿಸಲು ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.

ದೆಹಲಿ ಸ್ಫೋಟದ ಬಗ್ಗೆ ತಿಳಿದ ಬಳಿಕ ಮೈಸೂರು ಪೊಲೀಸರ ಜತೆ ಮಾತನಾಡಿದ್ದೇನೆ. ಬೆಂಗಳೂರು ಪೊಲೀಸರಿಗೂ ಸೂಚಿಸುತ್ತೇನೆ.ರಾಜ್ಯಾದ್ಯಂತ ಭದ್ರತೆ ಬಿಗಿಗೊಳಿಸಲು ತಿಳಿಸುತ್ತೇನೆ ಎಂದು ಹೇಳಿದ್ದಾರೆ.

ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಏರ್‌ಪೋರ್ಟ್‌, ರೈಲು ನಿಲ್ದಾಣ ಹಾಗೂ ಜನಸಂದಣಿ ಹೆಚ್ಚಿರುವ ಸ್ಥಳಗಳಲ್ಲಿ ಭದ್ರತೆ ಹೆಚ್ಚಿಸಲು ಸೂಚಿಸುತ್ತೇನೆ. ಇನ್ನು ಘಟನೆಯಲ್ಲಿ ಮೃತರಾದವರಿಗೆ ಸಂತಾಪ ಸೂಚಿಸುತ್ತೇನೆ ಎಂದರು.

error: Content is protected !!