Thursday, November 13, 2025

ದೆಹಲಿ ಕಾರು ಸ್ಫೋಟ: ಸ್ಥಳದಲ್ಲಿ ಪೊಲೀಸರಿಗೆ ಸಿಕ್ಕಿತು ಮಹತ್ವದ ಸುಳಿವು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿಯ ಕೆಂಪು ಕೋಟೆ ಬಳಿ ಕಾರಿನಲ್ಲಿ ಸಂಭವಿಸಿದ ಸ್ಫೋಟವು ರಾಷ್ಟ್ರ ರಾಜಧಾನಿಯನ್ನು ಬೆಚ್ಚಿಬೀಳಿಸಿದೆ. ಭೀಕರ ಸ್ಫೋಟದ ಹಿಂದೆ ಉಗ್ರ ಕೃತ್ಯದ ಶಂಕೆ ವ್ಯಕ್ತವಾಗಿದ್ದು, ಜನರನ್ನ ಆತಂಕಕ್ಕೆ ದೂಡಿದೆ.

ಈಗಾಗಲೇ ರಾಷ್ಟ್ರೀಯ ತನಿಖಾ ಸಂಸ್ಥೆ (NIA), ರಾಷ್ಟ್ರೀಯ ಭದ್ರತಾ ಸಿಬ್ಬಂದಿ (NSG) ತನಿಖಾಧಿಕಾರಿಗಳು ಸ್ಫೋಟದ ಸ್ಥಳಕ್ಕೆ ಧಾವಿಸಿದ್ದು, ಎಲ್ಲಾ ಆಯಾಮಗಳ ತನಿಖೆಗೆ ಮುಂದಾಗಿದ್ದಾರೆ. ಸ್ಥಳದಲ್ಲೇ ವಿಧಿವಿಜ್ಞಾನ ಪ್ರಯೋಗಾಲಯ ತಂಡದ ಅಧಿಕಾರಿಗಳೂ ಬೀಡುಬಿಟ್ಟಿದ್ದು, ಸ್ಫೋಟಕ್ಕೆ ಕಾರಣಗಳನ್ನ ಪತ್ತೆ ಮಾಡಲಾಗುತ್ತಿದೆ. ಈ ಮಧ್ಯೆ ನೆತ್ತರು ಹರಿದ ನೆಲದಲ್ಲಿ ಸಜೀವ ಗುಂಡು ಪತ್ತೆಯಾಗಿರುವುದು ಆತಂಕ ಹೆಚ್ಚಿಸಿದೆ.

ಸುಭಾಷ್ ಮಾರ್ಗದ ಟ್ರಾಫಿಕ್ ಸಿಗ್ನಲ್‌ನಲ್ಲಿ ವಾಹನ ಸ್ಫೋಟಗೊಂಡ ಸ್ಥಳದಲ್ಲಿ ಸಜೀವ ಗುಂಡು ಪತ್ತೆಯಾಗಿದೆ ಎಂದು ದೆಹಲಿ ಪೊಲೀಸ್ ಆಯುಕ್ತ ಸತೀಶ್ ಗೋಲ್ಚಾ ತಿಳಿಸಿದ್ದಾರೆ.

ಕೆಂಪು ಕೋಟೆ ಸಮೀಪದ ಲಾಲ್‌ ಕಿಲಾ ಮೆಟ್ರೋ ನಿಲ್ದಾಣ ಗೇಟ್ ಸಂಖ್ಯೆ-1ರ ಬಳಿ ಸೋಮವಾರ ಸಂಜೆ 6:45 ರಿಂದ 7 ಗಂಟೆ ಅವಧಿಯಲ್ಲಿ ಸ್ಫೋಟ ಸಂಭವಿಸಿದ್ದು, ಸಾವಿನ ಸಂಖ್ಯೆ ಈವರೆಗೆ 14ಕ್ಕೆ ಏರಿಕೆಯಾಗಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

error: Content is protected !!