‘ದೆಹಲಿ ಚಲೋ’ ಮೆರವಣಿಗೆ: ರಾಷ್ಟ್ರ ರಾಜಧಾನಿಯಲ್ಲಿ ಒಂದು ತಿಂಗಳು ಸೆಕ್ಷನ್ 144 ಜಾರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿ ಚಲೋ ಮೆರವಣಿಗೆಯಿಂದ ಉದ್ವಿಗ್ನತೆ ಮತ್ತು ಅಶಾಂತಿ ಉಂಟಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ರಾಷ್ಟ್ರ ರಾಜಧಾನಿಯಾದ್ಯಂತ ಒಂದು ತಿಂಗಳ ಕಾಲ ಸೆಕ್ಷನ್ 144 ಜಾರಿಗೊಳಿಸಿದ್ದಾರೆ.

ಈ ಕುರಿತು ದೆಹಲಿ ಪೊಲೀಸ್ ಆಯುಕ್ತ ಸಂಜಯ್ ಅರೋರಾ ಸೋಮವಾರ ಆದೇಶ ಹೊರಡಿಸಿದ್ದಾರೆ. ಯಾವುದೇ ರೀತಿಯ ರ‍್ಯಾಲಿ, ಮೆರವಣಿಗೆ, ರಸ್ತೆ ಮಾರ್ಗಗಳನ್ನು ನಿರ್ಬಂಧಿಸುವುದನ್ನು ನಿಷೇಧಿಸಲಾಗಿದೆ. ಈ ಆದೇಶವು ಫೆಬ್ರುವರಿ 12ರಿಂದ ಜಾರಿಗೆ ಬರಲಿದ್ದು, ಮಾರ್ಚ್ 12ರವರೆಗೆ ಜಾರಿಯಲ್ಲಿರುತ್ತದೆ.

ಟ್ರ್ಯಾಕ್ಟರ್ ರ‍್ಯಾಲಿಗೆ ‌ನಿಷೇಧ ಹೇರಲಾಗಿದೆ. ಪಂಜಾಬ್, ಉತ್ತರ ಪ್ರದೇಶ ಮತ್ತು ಹರಿಯಾಣದ ರೈತರು ಮೆರವಣಿಗೆ ಮೂಲಕ ದೆಹಲಿ ಪ್ರವೇಶಿಸುವ ನಿರೀಕ್ಷೆಯಿದೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ (SKM), ಕಿಸಾನ್ ಮಜ್ದೂರ್ ಮೋರ್ಚಾ (KMM) ಮತ್ತು ಇತರ ಹಲವಾರು ರೈತ ಸಂಘಗಳು ಫೆಬ್ರುವರಿ 13 ರಂದು ಸಂಸತ್ತಿನ ಹೊರಗೆ ಪ್ರತಿಭಟನೆ ನಡೆಸಲು ‘ದೆಹಲಿ ಚಲೋ ಮೆರವಣಿಗೆ’ಗೆ ಕರೆ ನೀಡಿವೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!