ಹೊಸದಿಗಂತ ಡಿಜಿಟಲ್ ಡೆಸ್ಕ್:
ರೈತರ ‘ದೆಹಲಿ ಚಲೋ’ ಪ್ರತಿಭಟನಾ ಮೆರವಣಿಗೆ ಎರಡು ದಿನಗಳ ಕಾಲ ಸ್ಥಗಿತಗೊಳಿಸುವುದಾಗಿ ರೈತ ಮುಖಂಡರೊಬ್ಬರು ಘೋಷಿಸಿದ್ದಾರೆ.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಂಜಾಬ್ ಕಿಸಾನ್ ಮಜ್ದೂರ್ ಸಂಘರ್ಷ್ ಸಮಿತಿಯ ಮುಖ್ಯಸ್ಥ ರೈತ ಮುಖಂಡ ಸರ್ವಾನ್ ಸಿಂಗ್ ಪಂಧೇರ್ , ನಾವು ಖಾನೌರಿಯಲ್ಲಿ ಸಂಭವಿಸಿದ ಘಟನೆಯ ಬಗ್ಗೆ ಚರ್ಚಿಸುತ್ತೇವೆ. ದೆಹಲಿ ಕಡೆಗೆ ನಮ್ಮ ಮೆರವಣಿಗೆ ಎರಡು ದಿನಗಳ ವಾಸ್ತವ್ಯವನ್ನು ಒಳಗೊಂಡಿರುತ್ತದೆ.ನಮ್ಮ ಮುಂದಿನ ಕ್ರಮಗಳ ಬಗ್ಗೆ ನಾವು ಸಂಪೂರ್ಣ ಪರಿಸ್ಥಿತಿ ಅವಲೋಕಿಸಿದ ನಂತರ ಸ್ಪಷ್ಟಪಡಿಸುತ್ತೇವೆ ಎಂದು ಹೇಳಿದ್ದಾರೆ.
#WATCH | Shambhu border: Farmer leader Sarwan Singh Pandher says, "…We will have discussions over the incident that took place in Khanauri. There will be a two-day stay on our march towards Delhi. We will clarify the entire situation later as to what our further movement will… pic.twitter.com/Wb3XnftBtH
— ANI (@ANI) February 21, 2024
ಹೀಗಾಗಿ ‘ದೆಹಲಿ ಚಲೋ’ ಪ್ರತಿಭಟನಾ ಮೆರವಣಿಗೆಯನ್ನು ಎರಡು ದಿನಗಳ ಕಾಲ ಸ್ಥಗಿತಗೊಳಿಸುವುದಾಗಿ ಘೋಷಿಸಿದ್ದಾರೆ.