ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಮದ್ಯನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಿದೆ. ನಂತರ ಜೂನ್ ಎರಡಕ್ಕೆ ಶರಣಾಗುವಂತೆ ತಿಳಿಸಿದೆ.
ಆಮ್ ಆದ್ಮಿ ಪಕ್ಷ (ಎಎಪಿ) ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಬಿಗ್ ರಿಲೀಫ್ ಸಿಕ್ಕಿದೆ. ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ದೀಪಂಕರ್ ದತ್ತಾ ಅವರ ಪೀಠ ಶುಕ್ರವಾರ ತೀರ್ಪು ಪ್ರಕಟಿಸಿದೆ.
ಆರನೇ ಹಂತದ ಮತದಾನ ಮೇ 25 ರಂದು ದೆಹಲಿಯಲ್ಲಿ ನಡೆಯಲಿದೆ. ಇದಕ್ಕೂ ಮುನ್ನ ಕೇಜ್ರಿವಾಲ್ ಜಾಮೀನಿನ ಮೇಲೆ ಬಿಡುಗಡೆಯಾಗಿರುವುದು ಆಮ್ ಆದ್ಮಿ ಪಕ್ಷಕ್ಕೆ ಬಿಗ್ ರಿಲೀಫ್ ನೀಡಿದೆ.