ನಾಳೆ ಅಯೋಧ್ಯೆಯ ರಾಮಮಂದಿರಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭೇಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ಸೋಮವಾರ ಅಯೋಧ್ಯೆಯ ರಾಮಮಂದಿರಕ್ಕೆ (Ram Mandir) ಭೇಟಿ ನೀಡಲಿದ್ದಾರೆ .

ಆಮ್ ಆದ್ಮಿ ಪಕ್ಷದ (AAP) ನಾಯಕ ಅವರ ಪತ್ನಿ ಮತ್ತು ಕುಟುಂಬಸ್ಥರೊಂದಿಗೆ ಭೇಟಿ ನೀಡಲಿದ್ದಾರೆ. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ (Bhagwant Mann) ಕೂಡ ಪವಿತ್ರ ತಾಣಕ್ಕೆ ಭೇಟಿ ನೀಡಲಿದ್ದಾರೆ.

ಜ.22 ರಂದು ನಡೆದ ‘ಪ್ರಾಣ ಪ್ರತಿಷ್ಠಾಪನೆ’ ಸಮಾರಂಭಕ್ಕೆ ತನಗೆ ಔಪಚಾರಿಕ ಆಹ್ವಾನ ಬಂದಿಲ್ಲ ಎಂದು ಕೇಜ್ರಿವಾಲ್ ಈ ಹಿಂದೆ ಹೇಳಿದ್ದರು. ಅವರು ತಮ್ಮ ಕುಟುಂಬದೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಲು ಬಯಸಿದ್ದಾರೆ ಎನ್ನಲಾಗಿತ್ತು.

 

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!