ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಮಧ್ಯಂತರ ಜಾಮೀನು ನೀಡಲು ದೆಹಲಿ ನ್ಯಾಯಾಲಯ ನಿರಾಕರಿಸಿದೆ.
ವೈದ್ಯಕೀಯ ಕಾರಣಗಳಿಗಾಗಿ 7 ದಿನಗಳ ಮಧ್ಯಂತರ ಜಾಮೀನು ಕೋರಿ ಕೇಜ್ರಿವಾಲ್ ಸಲ್ಲಿಸಿದ್ದ ಮನವಿಯನ್ನು ರೂಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ವಜಾಗೊಳಿಸಿದ್ದಾರೆ.
ಅವರ ನಿಯಮಿತ ಜಾಮೀನು ಅರ್ಜಿಯ ವಿಚಾರಣೆ ಜೂನ್ 07 ರಂದು ನಡೆಯಲಿದೆ.
ಮಾರ್ಚ್ 21ರಂದು ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಅವರಿಗೆ ಸುಪ್ರೀಂ ಕೋರ್ಟ್ ಜೂನ್ 01 ರವರೆಗೆ ಮಧ್ಯಂತರ ಜಾಮೀನು ನೀಡಿದೆ. ಇದಾದ ಒಂದು ದಿನದ ನಂತರ ಅವರು ಶರಣಾದರು.
ಕೇಜ್ರಿವಾಲ್ ಅವರನ್ನು ಜೂನ್ 19 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಅವರನ್ನು ಜೂನ್ 19 ರಂದು ಮಧ್ಯಾಹ್ನ 2 ಗಂಟೆಗೆ ರಜಾಕಾಲದ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುತ್ತದೆ.