ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೈಕೋರ್ಟ್ ಜಾಮೀನು ತಡೆ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ವಕೀಲರ ಮೂಲಕ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಗೆ ಅರವಿಂದ್ ಕೇಜ್ರಿವಾಲ್ ಅರ್ಜಿ ಸಲ್ಲಿಸಿದ್ದಾರೆ.
ರೋಸ್ ಅವೆನ್ಯೂ ನ್ಯಾಯಾಲಯ ಕೇಜ್ರಿವಾಲ್ ಗೆ ಜಾಮೀನು ನೀಡಿತ್ತು.ಈ ಆದೇಶಕ್ಕೆ ದೆಹಲಿ ಹೈಕೋರ್ಟ್ ತಡೆ ನೀಡಿತ್ತು.
ಇದೀಗ ದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ವಕೀಲರ ಮೂಲಕ ಅರವಿಂದ್ ಕೇಜ್ರಿವಾಲ್ ಅರ್ಜಿ ಸಲ್ಲಿಸಿದ್ದು, ನಾಳೆ ಅರ್ಜಿಯ ವಿಚಾರಣೆ ನಡೆಯುವ ಸಾಧ್ಯತೆ ಇದೆ.