ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಸಿಎಂ ಅತಿಶಿ ಇಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ್ದಾರೆ.
ಪ್ರಧಾನಿಯನ್ನು ಭೇಟಿಯಾಗಿ ರಾಷ್ಟ್ರ ರಾಜಧಾನಿಯ ಅಭಿವೃದ್ಧಿಯ ಕುರಿತು ಚರ್ಚಿಸಿ, ಕೇಂದ್ರದ ಸಂಪೂರ್ಣ ಸಹಕಾರ ಕೋರಿದರು.
ಪ್ರಧಾನಿ ಮೋದಿಯವರ ಭೇಟಿಯ ಕುರಿತು ದೆಹಲಿ ಸಿಎಂ ಅತಿಶಿ ತಮ್ಮ ಎಕ್ಸ್ (X) ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ನಾನು ಇಂದು ನರೇಂದ್ರ ಮೋದಿಜಿಯವರನ್ನು ಭೇಟಿಯಾಗಿದ್ದೆ. ರಾಷ್ಟ್ರ ರಾಜಧಾನಿಯ ಕಲ್ಯಾಣ ಮತ್ತು ಪ್ರಗತಿಗಾಗಿ ಕೇಂದ್ರ ಸರ್ಕಾರತದ ಸಂಪೂರ್ಣ ಸಹಕಾರದ ನಿರೀಕ್ಷೆಯಿದ್ದು, ದೊರೆಯುತ್ತದೆ ಎಂದು ಭಾವಿಸುತ್ತೇನೆ ಎಂದು ಪೋಸ್ಟ್ನಲ್ಲಿ ಉಲ್ಲೇಖಿಸಿದ್ದಾರೆ.