ದೆಹಲಿ ಸಿಎಂ ಕೇಜ್ರಿವಾಲ್‌ ಇಡಿ ಕಸ್ಟಡಿ ಮತ್ತೆ 4 ದಿನ ವಿಸ್ತರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಕ್ರಮ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನವಾಗಿರುವ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ (Arvind Kejriwal) ಅವರನ್ನು ಇಂದು ರೋಸ್ ಅವೆನ್ಯೂ ಕೋರ್ಟ್ಗೆ ಅವರನ್ನು ವಿಚಾರಣೆಗೆ ಕೆರದುಕೊಂಡು ಬರಲಾಗಿತ್ತು. ಇದೀಗ ಮತ್ತೆ 4 ದಿನ ಇಡಿ ಕಸ್ಟಡಿ ವಿಸ್ತರಣೆಯನ್ನು ಮಾಡಲಾಗಿದೆ ಎಂದು ದೆಹಲಿ ಕೋರ್ಟ್ ಆದೇಶ ನೀಡಿದೆ.

ಏಪ್ರಿಲ್ 1ರವರೆಗೆ ಇಡಿ ಕಸ್ಟಡಿ ಅವಧಿ ವಿಸ್ತರಣೆ ಮಾಡಲಾಗಿದೆ. ಇಡಿ ಕಸ್ಟಡಿ ಅವಧಿ ಅಂತ್ಯ ಹಿನ್ನೆಲೆ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು.

ದೆಹಲಿಯಲ್ಲಿ ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರನ್ನು ಮಾರ್ಚ್ 22ರಂದು ಇಡಿ ಸಂಬಂಧಿಸಿತ್ತು. ಆರು ದಿನಗಳ ಇಡಿ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಅವರನ್ನು ಇಂದು ಕೋರ್ಟ್ ಮುಂದೆ ಹಾಜರುಪಡಿಸಲಾಗಿದೆ. ಈ ವಿಚಾರಣೆಯನ್ನು ವಿಶೇಷ ಸಿಬಿಐ ನ್ಯಾಯಾಧೀಶ ಕಾವೇರಿ ಬವೇಜಾ ಅವರು ನಡೆಸಿ, 4 ದಿನ ಕಸ್ಟಡಿಯನ್ನು ವಿಸ್ತರಣೆ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!