ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ರೂಸ್ ಅವೆನ್ಯೂ ನ್ಯಾಯಾಲಯವುಮತ್ತೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಅಬಕಾರಿ ನೀತಿ ಸಂಬಂಧಿತ ಭ್ರಷ್ಟಾಚಾರ ಪ್ರಕರಣದಲ್ಲಿ ಮೂರು ದಿನಗಳ ಕಸ್ಟಡಿ ವಿಚಾರಣೆ ಮುಗಿದ ನಂತರ ಕೇಜ್ರಿವಾಲ್ ಅವರನ್ನು ಕೇಂದ್ರ ತನಿಖಾ ದಳ (CBI) ನ್ಯಾಯಾಲಯಕ್ಕೆ ಹಾಜರುಪಡಿಸಿತು.
ಈ ವೇಳೆ ನ್ಯಾಯಾಂಗ ಬಂಧನ ವಿಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಿಶೇಷ ನ್ಯಾಯಾಧೀಶೆ ಸುನೇನಾ ಶರ್ಮಾ ಸ್ವೀಕರಿಸಿದ್ದಾರೆ.