ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಜುಲೈ 12 ರವರೆಗೆ ದೆಹಲಿಯ ನ್ಯಾಯಾಲಯವೊಂದು ಬುಧವಾರ ವಿಸ್ತರಿಸಿದೆ.
ಅಬಕಾರಿ ನೀತಿಗೆ ಸಂಬಂಧಿಸಿದ ಸಿಬಿಐ ಪ್ರಕರಣದಲ್ಲಿ ಜೈಲಿನಲ್ಲಿರುವ ಕೇಜ್ರಿವಾಲ್, ವಿಡಿಯೋ ಕಾನ್ಫರೆನ್ಸ್ ಮೂಲಕ ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಅವರ ನ್ಯಾಯಾಲಯದ ಮುಂದೆ ವಿಚಾರಣೆಗೆ ಹಾಜರಾಗಿದ್ದರು.
ಈ ಮಧ್ಯೆ ವೈದ್ಯಕೀಯ ತಪಾಸಣೆಯ ಸಮಯದಲ್ಲಿ ತನ್ನ ಪತ್ನಿ ಸುನೀತಾ ಅಟೆಂಡರ್ ಆಗಿ ಹಾಜರಾಗಲು ಅವಕಾಶ ನೀಡುವಂತೆ ಕೇಜ್ರಿವಾಲ್ ಸಲ್ಲಿಸಿದ ಅರ್ಜಿಯ ಆದೇಶವನ್ನು ನ್ಯಾಯಾಲಯವು ಜುಲೈ 6 ಕ್ಕೆ ಕಾಯ್ದಿರಿಸಿದೆ.