ವಿಧಾನಸಭೆಯಲ್ಲಿ ವಿಶ್ವಾಸಮತ ನಿರ್ಣಯ ಮಂಡಿಸಿದ ದೆಹಲಿ ಸಿಎಂ ಕೇಜ್ರಿವಾಲ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ವಿಧಾನಸಭೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್​​​ ಕೇಜ್ರಿವಾಲ್​​​​ (Arvind Kejriwal) ಅವರು ವಿಶ್ವಾಸ ಮತ ಯಾಚನೆಗೆ ನಿರ್ಣಯ ಮಂಡಿಸಿದ್ದಾರೆ.

ನಾಳೆ ಸದನದ ಕಲಾಪ ನಡೆಯಲಿದ್ದು, ಪ್ರಸ್ತಾವನೆಯನ್ನು ಚರ್ಚೆಗೆ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ಸರ್ಕಾರದ ಮೇಲೆ ಒಂದಲ್ಲ ಒಂದು ರೀತಿ ಆರೋಪಗಳನ್ನು ಮಾಡುತ್ತಿದ್ದಾರೆ. ನಮ್ಮ ಸದಸ್ಯರ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ. ಇದರ ನಡುವೆ ನಮ್ಮ ಶಾಸಕರು ಹಾಗೂ ನಾಯಕರು ಎಎಪಿ ಪಕ್ಷವನ್ನು ಬಿಟ್ಟು ಬೇರೆ ಪಕ್ಷ ಹೋಗುತ್ತಿದ್ದಾರೆ ಎಂಬ ಸುಳ್ಳು ಸುದ್ದಿಗಳನ್ನು ಮಾಡಲಾಗುತ್ತದೆ. ದೆಹಲಿ ಸರ್ಕಾರದಲ್ಲಿ ಸಂಖ್ಯಾ ಬಲ ಇಲ್ಲ ಎಂದು ಹೇಳುತ್ತಿದ್ದಾರೆ. ನಮ್ಮ ಶಾಸಕರು ನಮ್ಮಲ್ಲಿಯೇ ಇದ್ದರೆ, ಅವರು ಎಲ್ಲಿಯು ಹೋಗಿಲ್ಲ. ಇದನ್ನು ನಾವು ಜನರ ಮುಂದೆ ಸಾಬೀತು ಮಾಡಬೇಕಿದೆ. ಈ ಕಾರಣಕ್ಕೆ ನಾನು ವಿಶ್ವಾಸ ನಿರ್ಣಯವನ್ನು ಮಂಡಿಸುತ್ತೇನೆ ಎಂದು ಹೇಳಿದ್ದಾರೆ.

ಶುಕ್ರವಾರ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚಿಸುವುದಾಗಿ ಅರವಿಂದ್ ಕೇಜ್ರಿವಾಲ್ ಈ ಹಿಂದೆ ಹೇಳಿದ್ದರು.

ಇನ್ನು ದೆಹಲಿ ಅಬಕಾರಿ ನೀತಿ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಕೇಜ್ರಿವಾಲ್‌ಗೆ ಪದೇ ಪದೇ ಸಮನ್ಸ್ ನೀಡುವ ವಿಷಯವನ್ನು ಕೂಡ ಈ ಸಭೆಯಲ್ಲಿ ಪ್ರಸ್ತಾಪಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಕೇಜ್ರಿವಾಲ್‌ಗೆ ಅವರಿಗೆ ಅಬಕಾರಿ ನೀತಿಗೆ ಸಂಬಂಧಿಸಿದಂತೆ ಆರು ಬಾರಿ ಸಮನ್ಸ್​​ ನೀಡಿದೆ. ಇಂತಹ ಅನೇಕ ಸಮನ್ಸ್​​ಗಳನ್ನು ನೀಡಿ ಮುಖ್ಯಮಂತ್ರಿಗಳನ್ನು ಬಂಧಿಸುವ ಮೂಲಕ ದೆಹಲಿಯಲ್ಲಿ ಸರ್ಕಾರವನ್ನು ಉರುಳಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಎಎಪಿ ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!