ಅಯೋಧ್ಯೆ ರಾಮಲಲಾನ ದರುಶನ ಪಡೆದ ದೆಹಲಿ ಸಿಎಂ ಕೇಜ್ರಿವಾಲ್‌, ಪಂಜಾಬ್ ಸಿಎಂ ಭಗವಂತ್ ಮಾನ್ ಕುಟುಂಬ!

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಅಯೋಧ್ಯೆಯ (Ayodhya) ರಾಮಮಂದಿರಕ್ಕೆ (Ram Mandir) ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರು ಕುಟುಂಬ ಸಮೇತರಾಗಿ ಭೇಟಿ ನೀಡಿ ರಾಮಲಲಾನ ದರುಶನ ಪಡೆದಿದ್ದರೆ

ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಗೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಸಾಥ್ ನೀಡಿದ್ದು, ಇಂದು (ಸೋಮವಾರ) ಭೇಟಿ ನೀಡಿದರು. ಉಭಯ ನಾಯಕರ ಕುಟುಂಬದವರು ಜೊತೆಗೆ ಭೇಟಿ ನೀಡಿದರು.

ರಾಮಲಲಾಗೆ ಪ್ರಾರ್ಥನೆ ಸಲ್ಲಿಸಿದ ನಂತರ ನಾನು ವರ್ಣಿಸಲಾಗದ ಶಾಂತತೆಯನ್ನು ಅನುಭವಿಸಿದೆ. ಪ್ರತಿದಿನ ಲಕ್ಷಾಂತರ ಭಕ್ತರು ಇಲ್ಲಿಗೆ ಭೇಟಿ ನೀಡುತ್ತಾರೆ. ಜನರ ಪ್ರೀತಿ ಮತ್ತು ಭಕ್ತಿಯನ್ನು ನೋಡುವುದು ನಿಜಕ್ಕೂ ಹೃದಯಸ್ಪರ್ಶಿಯಾಗಿದೆ. ಎಲ್ಲರ ಒಳಿತಿಗಾಗಿ ನಾನು ಪ್ರಾರ್ಥಿಸಿದ್ದೇನೆ ಎಂದು ಸಿಎಂ ಕೇಜ್ರಿವಾಲ್ ತಿಳಿಸಿದ್ದಾರೆ.

ರಾಮಲಲಾನ ದರ್ಶನ ಪಡೆಯುವುದು ನನ್ನ ಬಹುದಿನಗಳ ಆಸೆಯಾಗಿತ್ತು. ದೇಶದ ಕ್ಷೇಮಕ್ಕಾಗಿ ಪ್ರಾರ್ಥಿಸಿದ್ದೇನೆ ಎಂದು ಪಂಜಾಬ್ ಸಿಎಂ ಮಾನ್ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!