ಹೈಕೋರ್ಟ್​​​ ಆದೇಶವನ್ನು ಪ್ರಶ್ನಿಸಿ ‘ಸುಪ್ರೀಂ’ ಮೊರೆ ಹೋದ ದಿಲ್ಲಿ ಸಿಎಂ ಕೇಜ್ರಿವಾಲ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಡಿ ಬಂಧನವನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದ್ರೆ ಈಗ ಅರ್ಜಿಯನ್ನು ಹೈಕೋರ್ಟ್‌ ತಿರಸ್ಕರಿಸಿದೆ. ಅರವಿಂದ್ ಕೇಜ್ರಿವಾಲ್ ಇದೀಗ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಮಾರ್ಚ್ 21 ರಂದು ಕೇಜ್ರಿವಾಲ್ ಅವರನ್ನು ಬಂಧಿಸಿತ್ತು. ತನ್ನ ಬಂಧನದ ವಿರುದ್ಧ ಕೇಜ್ರಿವಾಲ್ ಮಾಡಿದ ಮನವಿಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ತಿರಸ್ಕರಿಸಿದೆ. ಕೇಜ್ರಿವಾಲ್ ಅವರ ಬಂಧನವು ಯಾವುದೇ ಕಾನೂನನ್ನು ಉಲ್ಲಂಘಿಸಿಲ್ಲ ಮತ್ತು ಅವರ ಬಂಧನವನ್ನು ಕಾನೂನುಬಾಹಿರವೆಂದು ಪರಿಗಣಿಸಲಾಗುವುದಿಲ್ಲ ಎಂದು ಹೈಕೋರ್ಟ್ ಹೇಳಿದೆ.

ಈ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸುವ ಹಕ್ಕು ಅರವಿಂದ್ ಕೇಜ್ರಿವಾಲ್‌ಗೆ ಇದೆ ಎಂದು ದೆಹಲಿ ಸಿಎಂ ಪರ ವಕೀಲ ರಿಷಿಕೇಶ್ ಕುಮಾರ್ ಹೇಳಿದ್ದಾರೆ.

ಅರವಿಂದ್ ಕೇಜ್ರಿವಾಲ್ ಅವರ ಅಕ್ರಮ ಬಂಧನವನ್ನು ನಾವು ಪ್ರಶ್ನಿಸಿದ್ದೇವೆ. ಬಂಧನ ವಾರಂಟ್ ಕಾನೂನುಬದ್ಧವಾಗಿದೆ ಎಂದು ಹೈಕೋರ್ಟ್ ತೀರ್ಪು ನೀಡಿದೆ. ಅವರನ್ನು ಬಂಧಿಸುವ ಅಧಿಕಾರ ಇಡಿಗೆ ಇದೆ. ಈ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನ ಮೊರೆ ಹೋಗಬಹುದು ಎಂದು ರಿಷಿಕೇಶ್ ಕುಮಾರ್ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!